Friday, September 13, 2024

ಮೋದಿ ಅವರು “ವಿಶ್ವಗುರು ಅಲ್ಲ. ಪುಕ್ಕಲು ಗುರು”: ಸಿದ್ದರಾಮಯ್ಯ

ಬೆಂಗಳೂರು : ನರೇಂದ್ರ ಮೋದಿ ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು, ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದಾರೆ.

ಬಿ.ಎಸ್‌.ಯಡಿಯೂರಪ್ಪ ಅವರು‌ ಕಾಂಗ್ರೇಸ್‌ ನಾಯಕ ರಾಹುಲ ಗಾಂಧಿಯವರನ್ನು ಬಚ್ಚಾ ಎಂದು ಕರೆದ ಹಿನ್ನಲೆ ಉಗ್ರ ರೂಪ ತಾಳಿರುವ ಕೈ ಪಾಳ ಬಿಎಸ್‌ವೈ ವಿರುದ್ಧ ವಾಕ್‌ ಸಮರ ಸಾರಿದೆ. ಇನ್ನು ಟ್ಟೀಟ್‌ ಮೂಲಕ ಗುಡುಗಿರುವ ಸಿದ್ದರಾಮಯ್ಯ ಅವರು, ಬಿಎಸ್‌ ಯಡಿಯೂರಪ್ಪ ಅವರೇ, ನಿಮ್ಮ ನರೇಂದ್ರ ಮೋದಿಯವರು
ವಿಶ್ವಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಬಡಾಯಿ ಬೊಮ್ಮಾಯಿ ಎಂದು ವ್ಯಂಗ್ಯವಾಡಿದ್ದಾರೆ.

ಅಲ್ಲದೆ ಪಾಪ, ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು ಎಂದು ಬಿಎಸ್‌ವೈಗೆ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. 

ಇನ್ನು ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ರಾಜ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

 

 

 

 

 

 

 

ಕೃಪೆ:ಜೀ

ಜಿಲ್ಲೆ

ರಾಜ್ಯ

error: Content is protected !!