Thursday, July 25, 2024

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಹಿನ್ನೆಲೆ, ಮುದಗಲ್ಲದಲ್ಲಿ ಸಂಭ್ರಮ ಆಚರಣೆ.

 ಮುದಗಲ್ಲ : ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಮುದಗಲ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶಾಸಕರ ನೇತೃತ್ವದಲ್ಲಿ ಮುದಗಲ್ಲ ಪುರಸಭೆ ಕಾರ್ಯಲಯದ ಮುಂದೆ ವಿಜಯೋತ್ಸವವನ್ನು ಆಚರಿಸಲಾಯಿತು. ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ದೊರಕಿದೆ ಅದರ ಹಿನ್ನೆಲೆಯಲ್ಲಿ ಮುದಗಲ್ಲನಲ್ಲಿ ಪಟಾಕಿ ಸಿಡಸಿ ಹಾಗೂ ಸಿಹಿ ಅಚ್ಚುವ ಮೂಲಕ ಕಾಂಗ್ರೆಸ್ ಮುಖಂಡರು ಸಂಭ್ರಮ ಆಚರಣೆ ಮಾಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಲಿಂಗಸೂರು ಕ್ಷೇತ್ರದ ಶಾಸಕ ಡಿ.ಎಸ್ ಹೂಲಿಗೇರಿ ಅವರು ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಬುಧವಾರ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ ಎಂದರು. 

ಪಕ್ಷದ ಹೊಸ ಅಧ್ಯಕ್ಷರನ್ನು ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌ ಅಭಿನಂದಿಸಿದ್ದು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿರುವುದು ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಆ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುದಗಲ್ಲ ಬ್ಲಾಕ್ ಅದ್ಯಕ್ಷರಾದ ದಾವೂದ್ ಸಾಬ. ಮುದಗಲ್ಲ ಪುರಸಭೆ ಉಪಾಧ್ಯಕ್ಷ ಶಿವಗ್ಯಾನಪ್ಪ ಭೋವಿ, ಕಾಂಗ್ರೆಸ್ ಮುಖಂಡರಾದ ಸೈಯದ್ ಸಾಬ ಮಾಹಾಂತೇಶ ಪಾಟೀಲ್ ,ರಘವೀರ್ ಚಲುವಾಧಿ ,ಯುವ ಕಾಂಗ್ರೆಸ್ ಅಧ್ಯಕ್ಷ ಮುನ್ನ , ಕೃಷ್ಣ ಚಲುವಾದಿ ಪಕ್ಷದ ಹಿರಿಯ ಮುಖಂಡರು,ಕಾರ್ಯಕರ್ತರು ಉಪಸ್ಥಿತಿ ಇದ್ದರು.

 

ವರದಿ: ಮಂಜುನಾಥ ಕುಂಬಾರ.

ಜಿಲ್ಲೆ

ರಾಜ್ಯ

error: Content is protected !!