Wednesday, September 18, 2024

ಭರ್ಜರಿ ಬೇಟೆ ಆಡಿದ ಲೋಕಾಯುಕ್ತರು, ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಲೋಕಾಯುಕ್ತರ ಬಲೆಗೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಐತಿಹಾಸಿಕ ಕಿತ್ತೂರು ತಹಶೀಲ್ದಾರ್ ಮತ್ತು ತಹಶೀಲ್ದಾರ ಕಚೇರಿಯ ಕೇಸ್ ವರ್ಕರ್ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿ ಕಿತ್ತೂರು ತಹಸಿಲ್ದಾರ ಸೋಮಲಿಂಗಪ್ಪ ಹಾಲಗಿ ಮತ್ತು ಕೇಸ್ ವರ್ಕರ್ ಪ್ರಸನ್ನ ಜಿ. ಲೋಕಾಯುಕ್ತ ಬಲೆಗೆ ಬಿದ್ದಿದಾರೆ

ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದ ಬಾಪುಸಾಹೇಬ ಇನಾಂದಾರ್ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗಾಗಿ ಅರ್ಜಿ ಸಲ್ಲಿಸಿದ್ದರು. ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. 2 ಲಕ್ಷ ರೂ. ಸ್ವೀಕರಿಸುವಾಗ ಭರ್ಜರಿ ಬೇಟೆಯಾಡಿದ್ದಾರೆ

 

ಬಾಪುಸಾಹೇಬ ಅವರ ಪುತ್ರ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಾಜೇಂದ್ರ ಇನಾಮದಾರ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಜಿಲ್ಲೆ

ರಾಜ್ಯ

error: Content is protected !!