Saturday, July 27, 2024

ಪ್ರಚಾರದ ನೆಪ ಹೇಳಿ ಮಂಚಕ್ಕೆ ಕರೆದ ಅಭ್ಯರ್ಥಿ; ಕ್ಷೇತ್ರಾದ್ಯಂತ ಪ್ರತಿಭಟನೆ

ತುಮಕೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ನಡುವೆ ಜೆಡಿಎಸ್ ಅಭ್ಯರ್ಥಿಯೊಬ್ಬರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಚುನಾವಣಾ ಪ್ರಚಾರದ ನೆಪದಲ್ಲಿ ಮಂಚಕ್ಕೆ ಕರೆದಿದ್ದಾರೆ ಎನ್ನಲಾಗಿದೆ.

ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಪ್ರಚಾರದ ನೆಪವೊಡ್ಡಿ ಗೋವಿಂದರಾಜು ಮಹಿಳೆಯರನ್ನು ಮಂಚಕ್ಕೆ ಕರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಗೋವಿಂದರಾಜುವನ್ನು ಪಕ್ಷದಿಂದ ವಜಾಗೊಳಿಸುವಂತೆ ಆಗ್ರಹಿಸಿ ಮಹಿಳೆಯರು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಗೋ ಬ್ಯಾಕ್ ಗೋವಿಂದರಾಜು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಗೆ ಹೆಣ್ಣು ಮಕ್ಕಳ ಮೇಲೆ ಗೌರವ ಇದ್ದರೆ ಗೋವಿಂದರಾಜುವನ್ನು ತಕ್ಷಣ ಪಕ್ಷದಿಂದ ವಜಾಗೊಳಿಸಲಿ ಎಂದು ಆಗ್ರಹಿಸಿದ್ದಾರೆ.

ಗೋವಿಂದರಾಜು ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ರೇಷ್ಮಾ ಎಂಬ ಮಹಿಳೆ ದೂರು ನೀಡಿದ್ದರು. ಅಲ್ಲದೇ ಗೋವಿಂದರಾಜು ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿತ್ತು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಗೋವಿಂದರಾಜು ವಿರುದ್ಧ ಮಹಿಳೆಯರು ಸಿಡಿದೆದ್ದಿದ್ದಾರೆ.

ಆರೋಪ ನಿರಾಕರಿಸಿದ ಜೆಡಿಎಸ್ ಅಭ್ಯರ್ಥಿ :ಇನ್ನು, ದೂರು ನೀಡಿದ ಮಹಿಳೆ ಜೆಡಿಎಸ್​ ಅಭ್ಯರ್ಥಿ ಮಾತನಾಡಿದ್ದಾರೆ ಎನ್ನಲಾದ ಕೆಲವು ಆಡಿಯೋ ಸಾಕ್ಷ್ಯಗಳನ್ನು ನೀಡಿದ್ದರು. ಅಲ್ಲದೆ ಗೋವಿಂದರಾಜು ಮನೆಯ ಎದುರು ಗಲಾಟೆ ನಡೆಸಿ ಹೈಡ್ರಾಮಾವನ್ನೇ ಸೃಷ್ಟಿಸಿದ್ದರು. ಆಡಿಯೋದಲ್ಲಿ ಮಹಿಳೆ ಜೊತೆ ಅಶ್ಲೀಲವಾಗಿ ಮಾತನಾಡಿರುವುದು ಕಂಡು ಬಂದಿದೆ. ಆದರೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೋವಿಂದರಾಜು, ಆಡಿಯೋದಲ್ಲಿ ಮಾತನಾಡಿರುವ ವ್ಯಕ್ತಿ ನಾನು ಅಲ್ಲ, ಆ ಮಹಿಳೆ ಯಾರು ಅಂತನೇ ನನಗೆ ಗೊತ್ತಿಲ್ಲ. ಎದುರಾಳಿ ಕಾಂಗ್ರೆಸ್​ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ನಡೆಸಲು ಕುತಂತ್ರದಿಂದ ಆಡಿಯೋ ಹೊರಬಿಟ್ಟಿದ್ದಾರೆ ಎಂದಿದ್ದಾರೆ.

ಜಿಲ್ಲೆ

ರಾಜ್ಯ

error: Content is protected !!