Sunday, September 8, 2024

ರಸಪ್ರಶ್ನೆ ಸ್ಫರ್ಧೆಯಲ್ಲಿ ಸಂಕೇತ ಕಂಬಿ, ಆಂಜನೇಯ ಪೂಜಾರ ಪ್ರಥಮ

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: ಸ್ಥಳೀಯ ಸರ್ಕಾರಿ ಬಾಲಕಿಯರ ಪ್ರೌಡ ಶಾಲೆಯಲ್ಲಿ ಕಿತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಗುರುವಾರ ಜರುಗಿದವು.

ಕಿತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕಿತ್ತೂರು ವಲಯದ ವಿವಿಧ ಪ್ರೌಡಶಾಲೆಯ ಮಕ್ಕಳು ಭಾಗವಹಿಸಿದ್ದರು. ರಸಪ್ರಶ್ನೆ ಸ್ಫರ್ಧೆಯಲ್ಲಿ ವಲದ 7 ಶಾಲೆಯ ಮಕ್ಕಳು ಭಾಗವಹಿಸಿದ್ದರು. ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿ ಸಂಕೇತ ಕಂಬಿ ಹಾಗೂ 10 ನೇ ತರಗತಿಯ ವಿದ್ಯಾರ್ಥಿ ಆಂಜನೇಯ ಪೂಜಾರ ಪ್ರಥಮ ಸ್ಥಾನ ಪಡೆದರು. ಕಿತ್ತೂರ ಅಬ್ದುಲ್‌ ಕಲಾಂ ಮೌಲಾನಾ ಅಜಾದ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ, ಎಸ್‌ ವ್ಹಿ ಗಡಗಿ ಪ್ರೌಡಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದರು

ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಚಾರ್ಯರು, ಸಹ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಅಭಿನಂದಿಸಿದ್ದಾರೆ.

 

ಜಿಲ್ಲೆ

ರಾಜ್ಯ

error: Content is protected !!