Tuesday, May 28, 2024

22ನೇ ವಯಸ್ಸಿನಲ್ಲಿ ಎಮ್ಮೆ ಕದ್ದವ 80ರಲ್ಲಿ ಸಿಕ್ಕ..!

ಬೀದರ್: 58 ವರ್ಷಗಳಿಂದ ಪೊಲೀಸರ  ಕೈಗೇ ಸಿಗದೇ ನ್ಯಾಯಾಲಯಕ್ಕೂ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಎಮ್ಮೆ ಕಳ್ಳನನ್ನು ಬೀದರ್ ಪೊಲೀಸರು  ಬಂಧಿಸಿದ್ದಾರೆ.

ಮಹಾರಾಷ್ಟ್ರದ ಮೂಲದ ಕಿಶನ್ ಚಂದರ್ ಹಾಗೂ ಗಣಪತಿ ವಿಠಲ್ ವಾಗ್ಮೋರೆ 1965ರಲ್ಲಿ 2 ಎಮ್ಮೆ, 1 ಕರು ಕದ್ದಿದ್ದರು. ಎಮ್ಮೆ ಮಾಲೀಕ ಮರಳೀಧರಾವ್ ಕುಲಕರ್ಣಿ ಎಂಬುವರು ಭಾಲ್ಕಿಯ ಮಹಕರ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದರು

ಜಾಮೀನು ಸಿಕ್ಕಿದ ಬಳಿಕ ಇಬ್ಬರು ಕೋರ್ಟ್‌ಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದರು. ಸಮನ್ಸ್, ನೋಟಿಸ್, ವಾರೆಂಟ್ ನೀಡಿದ್ದರೂ ಆರೋಪಿಗಳು ಕ್ಯಾರೇ ಅಂದಿರಲಿಲ್ಲ. ಈ ಪೈಕಿ 2006 ರಲ್ಲಿ ಮೊದಲ ಆರೋಪಿ ಕಿಶನ್ ಚಂದರ್ ಮೃತ ಪಟ್ಟಿದ್ದು, ಈ ಪ್ರಕರಣದ ಎರಡನೇ ಆರೋಪಿ ಪತ್ತೆಗಾಗಿ ಎಸ್‌ಪಿ ಚೆನ್ನಬಸವಣ್ಣ ಲಂಗೋಟಿ ವಿಶೇಷ ತಂಡ ರಚನೆ ಮಾಡಿದ್ದರು.

ಈಗ ಮಹಾರಾಷ್ಟ್ರದ ಲಾತೂರಿನ ಟಾಕಳಗಾಂವ್ ಗ್ರಾಮದಲ್ಲಿ ಬೀದರ್ ಪೊಲೀಸರು ಎರಡನೇ ಆರೋಪಿ ಗಣಪತಿ ವಿಠಲ್ ವಾಗ್ಮೋರೆಯನ್ನು ಬಂಧಿಸಿದ್ದಾರೆ.

 

 

 

ಜಿಲ್ಲೆ

ರಾಜ್ಯ

error: Content is protected !!