Saturday, July 20, 2024

ಕುಡಚಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..! ಐವರ ವಿರುದ್ಧ ಕೇಸ್.

ಬೆಳಗಾವಿ: ರಾಯಬಾಗ ತಾಲೂಕಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸಿಇಎನ್ ಇನ್ಸ್‌ಪೆಕ್ಟರ್ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಅಂತಾರಾಜ್ಯದಿಂದ ಯುವತಿಯರ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖದೀಮರು ಅಂದರ್ ಆಗಿದ್ದಾರೆ.

ಈ ದಾಳಿ ವೇಳೆ ಗುಜರಾತ್ ಮತ್ತು ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಪ್ರಕರಣ ಸಂಬಂಧ ಲಾಡ್ಜ್ ಮಾಲೀಕ ಶಿವರಾಜ ಬಸಗುಂಡೆ ಸೇರಿ ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಕಿಂಗ್‌ಪಿನ್, ಲಾಡ್ಜ್ ಮ್ಯಾನೇಜರ್ ಮೈಸೂರು ಜಿಲ್ಲೆ ನಂಜನಗೂಡು ಮೂಲದ ರಮೇಶ್ ರಾವಳಿ, ಶಂಕರ್ ಎಂಬುವರನ್ನ ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.

ಬಾಡಿಗೆಗೆ ಪಡೆದು ನಂಜುನಗೂಡು ಮೂಲದ ರಮೇಶ್ ರಾವಳಿ ಲಾಡ್ಜ್ ನಡೆಸುತ್ತಿದ್ದ. ಯುವತಿಯರ ಫೋಟೋಗಳನ್ನು ಗ್ರಾಹಕರಿಗೆ ತೋರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆ

ರಾಜ್ಯ

error: Content is protected !!