Friday, June 28, 2024

ಕಳ್ಳಬಟ್ಟಿ ಸಾರಾಯಿ ಮಾರಾಟ: ಒಂದು ವರ್ಷ ಕಠಿಣ ಜೈಲು ಶಿಕ್ಷೆ; 10 ರೂ. ದಂಡ ವಿಧಿಸಿ ಕೋರ್ಟ್ ತೀರ್ಪು

ಬೈಲಹೊಂಗಲ: ಕಳ್ಳಬಟ್ಟಿ ಸಾರಾಯಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಗೆ ಇಲ್ಲಿನ ಪ್ರಧಾನ ಸಿವಿಲ್ ಜೆಎಂಎಫ್‌ಸಿ ನ್ಯಾಯಾಲಯ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ಬೈಲಹೊಂಗಲ ತಾಲೂಕಿನ ಮೋಹರೆ ಗ್ರಾಮದ ನಿವಾಸಿ ಸದೆಪ್ಪ ಬೋರಪ್ಪ ತಳವಾರ (30) ಶಿಕ್ಷೆಗೊಳಗಾದ ವ್ಯಕ್ತಿ. ಶಿಕ್ಷೆಗೊಳಗಾಗಿರುವ ಆರೋಪಿ ಸದೆಪ್ಪ ತಳವಾರ ಮೊಹರೆಯಲ್ಲಿರುವ ತನ್ನ ಮನೆಯಲ್ಲಿ 4 ಲೀಟರ್ ಕಳ್ಳಬಟ್ಟಿ ಸಾರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟುಕೊಂಡಿದ್ದರ ಬಗ್ಗೆ 2020 ರಂದು ಪ್ರಕರಣ ದಾಖಲಾಗಿತ್ತು. ಇಲಾಖೆಯ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಮನುಶರ್ಮಾ ಎಸ್ ಪಿ ಅವರು ವಾದ-ಪ್ರತಿವಾದಗಳನ್ನು ಪರಿಶೀಲಿಸಿ ಆರೋಪಿಗೆ 1 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ಸರಕಾರದ ಪರವಾಗಿ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕಿ ಸುನೀತಾ ಗೌಡ ವಾದ ಮಂಡಿಸಿದ್ದರು.

ಜಿಲ್ಲೆ

ರಾಜ್ಯ

error: Content is protected !!