Saturday, June 15, 2024

ನಂದಗಡ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಾಗಿ ರೈತ ಸಾವು

ಖಾನಾಪುರ: ಹಸುಗಳಿಗೆ ಮೇವು ತರಲು ಹೊಲಕ್ಕೆ ಹೋದ ಸಮಯದಲ್ಲಿ ರೈತ ವಿದ್ಯುತ್ ಹರೆಯುತ್ತಿದ್ದ ತಂತಿ ಸ್ಪರ್ಶಿಸಿ ಮೃತಪಟ್ಟ ಘಟನೆ ಕೊಡಚವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇರುವ ಚಿಕ್ಕದಿನಕೊಪ್ಪ ಗ್ರಾಮದಲ್ಲಿ ಮಂಗಳವಾರ ಘಟನೆ ನಡೆದಿದೆ.

ಮೃತ ರೈತ ಮಹಾವೀರ ಮಲ್ಲಣ್ಣವರ (೫೫) ಎಂದು ಗುರುತಿಸಲಾಗಿದೆ.

ಇವರು ಪ್ರತಿದಿನ ಹಸುಗಳಿಗೆ ಮೇವು ತರಲು ಜಮೀನಿಗೆ ಹೋಗುತ್ತಿದ್ದರು. ಮಾರ್ಗಮಧ್ಯದಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದಾಗ ವಿದ್ಯುತ್ ಸ್ಪರ್ಶಿಸಿದ್ದರಿಂದ ಸ್ಥಳದಲ್ಲೇ ಮೃತಪಟ್ಟರು ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಈ ಕುರಿತು ನಂದಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆ

ರಾಜ್ಯ

error: Content is protected !!