Saturday, July 20, 2024

ರಾಜ್ಯ ಮಟ್ಟದ “ಕರ್ನಾಟಕ ಮಾಧ್ಯಮ ಸೇವಾರತ್ನ” ಪ್ರಶಸ್ತಿಗೆ ಬಸವರಾಜ ಚಿನಗುಡಿ ಆಯ್ಕೆ

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: 2023ನೇ ಸಾಲಿನ ರಾಜ್ಯ ಮಟ್ಟದ “ಕರ್ನಾಟಕ ಮಾಧ್ಯಮ ಸೇವಾ ರತ್ನ” ಪ್ರಶಸ್ತಿಗೆ ಉದಯವಾಣಿ ದಿನಪತ್ರಿಕೆ ಕಿತ್ತೂರು ತಾಲೂಕಾ ವರದಿಗಾರರು ಗಾಹೂ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಬಸವರಾಜ ಚಿನಗುಡಿ  ಭಾಜನರಾಗಿದ್ದಾರೆ. 

ಮುದ್ರಣ ಮಾದ್ಯಮ ಮತ್ತು ದೃಶ್ಯ ಮಾದ್ಯಮದಲ್ಲಿ ಕಳೆದ 10 ವರ್ಷಗಳಿಂದ ಕಿತ್ತೂರು ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನರ ಹಲವಾರು ಸಮಸ್ಯೆಗಳನ್ನು ತಮ್ಮ ವಿಶೇಷ ಲೇಖನಗಳ ಮೂಲಕ ಸರಕಾರದ ಗಮನ ಸೆಳೆದು, ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕ ಮತ್ತು ನಿಸ್ವಾರ್ಥ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಈ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ವತಿಯಿಂದ ಇಂದು(ಡಿ. 23) ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ರಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕೀರಣ, ಸಾಂಸ್ಕೃತಿಕ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಕಾನಿಪ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. 

ಪ್ರಶಸ್ತಿ ಪುರಸ್ಕೃತ ಬಸವರಾಜ ಚಿನಗುಡಿ ಅವರನ್ನು ಐತಿಹಾಸಿಕ ಕಿತ್ತೂರು ನಾಡಿನ ಸಂತ ಮಹಾಂತರು, ಮಠಾಧೀಶರು, ರಾಜಕಾರಣಿಗಳು, ಸ್ನೇಹಿತರು, ರಾಷ್ಟ್ರೀಯ ಬಸವ ದಳ, ರಾಷ್ಟ್ರೀಯ ಬಸವ ಸೇನೆ, ಜಾಗತಿಕ ಲಿಂಗಾಯತ ಮಹಾಸಭಾದ ಪದಾಧುಕಾರಿಗಳು,ಸರ್ವ ಸದಸ್ಯರು ಪಟ್ಟಣದ ನಾಗರಿಕರು ಸೇರಿದಂತೆ ಇತರರು ಅಭಿನಂದಿಸಿದ್ದಾರೆ.

 

ಜಿಲ್ಲೆ

ರಾಜ್ಯ

error: Content is protected !!