Saturday, June 29, 2024

ಕಿತ್ತೂರು ಕಲ್ಮಠದಲ್ಲಿ ನಾಳೆ ಮಾಸಿಕ ಶಿವಾನುಭವ ಕಾರ್ಯಕ್ರಮ

ಸುದ್ದಿ ಸದ್ದು ನ್ಯೂಸ್

ನ್ನಮ್ಮನ ಕಿತ್ತೂರು:- ಐತಿಹಾಸಿಕ ಕಿತ್ತೂರು ಪಟ್ಟಣದಲ್ಲಿ ಇರುವ ಕಲ್ಮಠದ ಶ್ರೀ ಚಂದರಗಿ ಸಭಾ ಭವನದಲ್ಲಿ ಮಂಗಳವಾರ ಡಿ 26 ರಂದು ಸಾಯಂಕಾಲ 6 ಗಂಟೆಗೆ ಮಾಸಿಕ ಶಿವಾನುಭವ ಕಾರ್ಯಕ್ರಮ ನಡೆಯಲಿದೆ ಎಂದು ಕಿತ್ತೂರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ.ಎಸ್. ಬಿ. ದಳವಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಾನುಭವ ಗೋಷ್ಠಿ ಕಾರ್ಯಕ್ರಮದ ದಿವು ಸಾನಿಧ್ಯವನ್ನು ಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಸಾನಿದ್ಯವನ್ನು ನಿಚ್ಚಣಕಿ ಮಡಿವಾಳೇಶ್ವರ ಮಠದ ಪೂಜ್ಯ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಕಸಾಪ ಅಧ್ಯಕ್ಷ ಡಾ.ಎಸ್.ಬಿ. ದಳವಾಯಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಿವಾನುಭವ ಕಾರ್ಯಕ್ರಮದಲ್ಲಿ ಹಿರೇನಂದಿಹಳ್ಳಿಯ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗಯ್ಯ ಹುಲೆಪ್ಪನವರಮಠ ಅಷ್ಟಾವರಣ ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರತಿ ತಿಂಗಳು ಹುಣ್ಣಿಮೆಯ ದಿವಸ ನಡೆಯಲಿರುವ ಈ ಕಾರ್ಯಕ್ರಮದಲ್ಲಿ  ಖ್ಯಾತ ಸಂಗೀತ ಶಿಕ್ಷಕರಾದ ಈಶ್ವರ ಗಡಿಬಿಡಿ, ಪ್ರಲ್ಹಾದ ಶಿಗ್ಗಾಂವಿ ಹಾಗೂ ಹಿರೇ ನಂದಿಹಳ್ಳಿ ಸದ್ಗುರು ಶ್ರೀ ನಾಗಭೂಷಣ ಶಿವಯೋಗಿ ಭಜನಾ ಮಂಡಳಿ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದ್ದು ಕಿತ್ತೂರ ನಾಡಿನ ಶರಣ ಶರಣೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ವಿನಂತಿ ಮಾಡಿದ್ದರೆ.

ಜಿಲ್ಲೆ

ರಾಜ್ಯ

error: Content is protected !!