Saturday, June 29, 2024

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ಈ ನಿಟ್ಟಿನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಜಾಗೃತಿ ಮೂಡಿಸುವ ಮೂಲಕ ಮಾದರಿಯಾಗಿದ್ದು, ನವ ವಧುವರರಿಗೆ ಹಾಗೂ ಅವರ ಕುಟುಂಬಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ

ಜಿಲ್ಲೆ

ರಾಜ್ಯ

error: Content is protected !!