ಕಾಂಗ್ರೆಸ್ ನಾಯಕರಿಗೆ ಬೇರೆ ಕೆಲಸ ಇಲ್ಲ: ಅದಕ್ಕಾಗಿ ಏನೇನೂ ಮಾತನಾಡುತ್ತಾರೆ: ಉಮೇಶ ಕತ್ತಿ

ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಚಿವ ಉಮೇಶ್ ಕತ್ತಿ
ಉಮೇಶ ಗೌರಿ (ಯರಡಾಲ)

ಬೆಳಗಾವಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಏಳು ವರ್ಷಗಳ ಕಾಲ ದೇಶದಲ್ಲ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಬಡವರಿಗಾಗಿ ಅನೇಕ ಒಳ್ಳೆಯ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ನಾಯಕರು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಆಹಾರ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ವಾಗ್ದಾಳಿ ಮಾಡಿದರು.

ಪ್ರಧಾನಿ ಮೋದಿ ಹೆಬ್ಬೆಟ್ಟು ಗಿರಾಕಿ ಎಂದು ಕಾಂಗ್ರೆಸ್ ನಾಯಕರ ಹೇಳಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಳಗಾವಿಯಲ್ಲಿ ಮಾಧ್ಯಮ ಮಿತ್ರರ ಜೊತೆ ಮಾತನಾಡಿದ ಸಚಿವ ಉಮೇಶ ಕತ್ತಿ ದೇಶದ ಪ್ರಧಾನಿಯಾಗಿ ಮೋದಿ ಅವರು ಉತ್ತಮ ಆಡಳಿತ ಕೊಟ್ಟಿದ್ದಾರೆ. ವಿಶೇಷವಾಗಿ ಬಡ ಕೂಲಿ ಕಾರ್ಮಿಕರಿಗೆ ಉಚಿತ ಗ್ಯಾಸ್ ವಿತರಣೆ ಸೇರಿದಂತೆ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಕೈ ನಾಯಕರಿಗೆ ಮಾಡಲು ಕೆಲಸ ಇಲ್ಲ, ಹೀಗಾಗಿ ಏನೇನೋ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು.

ಇನ್ನು ಕೋವಿಡ್ -19 ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಾದ

ಕಾರಣ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಾಗಿದೆ. ಶೀಘ್ರದಲ್ಲಿಯೇ ಕಡಿಮೆ ಆಗಲಿದೆ. . ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಟ್ಯಾಕ್ಸ ಕುರಿತು ನಿನ್ನೆಯಷ್ಟೇ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಜೊತೆ ಪ್ರಧಾನಿ ನರೇಂದ್ರ ಮೋದಿ,ಅವರು ಬೆಲೆ ಕಡಿಮೆ ಮಾಡುವ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ ಎಂದು ಉಮೇಶ ಕತ್ತಿ ಹೇಳಿದರು.

ಬರುವ ಮೇ-ಜೂನ್‍ನಲ್ಲಿ ವಿಧಾನಪರಿಷತ್ ಚುನಾವಣೆ ನಡೆಯಲಿದೆ ಹೀಗಾಗಿ ಐದು ಜಿಲ್ಲೆಗಳ ಕಾರ್ಯಕರ್ತರನ್ನು ಕೂಡಿಸಿ ಇಂದು ಸಭೆ ಮಾಡಿದ್ದೇವೆ. ಯಾವ ರೀತಿ ಚುನಾವಣೆ ನಡೆಸಬೇಕು ಎಂಬ ಬಗ್ಗೆ ಚರ್ಚೆ ಮಾಡಲಾಗಿದೆ. ಪಕ್ಷದ ಅನೇಕ ಕಾರ್ಯಕರ್ತರು ಆಕಾಂಕ್ಷಿಗಳಿದ್ದಾರೆ. ಯಾರಿಗೆ ಟಿಕೇಟ್ ಕೊಡಬೇಕು ಎಂಬುದನ್ನು ಪಕ್ಷದ ಹಿರಿಯ ನಾಯಕರು ತೀರ್ಮಾನಿಸುತ್ತಾರೊ ಅದೇ ನನ್ನ ತೀರ್ಮಾನವಾಗಿದೆ. ಇನ್ನು ರಮೇಶ ಕತ್ತಿ ಸ್ಪರ್ಧಿಸುವ ಬಗ್ಗೆ ಅವರನ್ನೇ ಕೇಳಿ ಮಾಹಿತಿ ಪಡೆದುಕೊಳ್ಳಿ ಎಂದು ಉಮೇಶ ಕತ್ತಿ ಹೇಳಿದರು.

Share This Article
";