Tuesday, September 17, 2024

ಸುದ್ದಿ-ಸದ್ದು ನ್ಯೂಸ್

ಕಾವೇರಿ ವಿವಾದ ಬಗೆಹರಿಸಲು ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು: ಮಾಜಿ ಸಿಎಂ ಬೊಮ್ಮಾಯಿ.

ಬೆಂಗಳೂರು: ಕಾವೇರಿ ವಿವಾದ ಬಗೆಹರಿಸಲು ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬೆಂಗಳೂರು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, " ‌ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಲು ಸಾಧ್ಯವಿಲ್ಲ. ಬದಲಾಗಿ ಸೋನಿಯಾ ಗಾಂಧಿ ಮಧ್ಯಪ್ರದೇಶ ಮಾಡಿ ತಮಿಳುನಾಡಿಗೆ ಬುದ್ದಿವಾದ ಹೇಳಬೇಕು....

ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರಿದ್ದ ಅರ್ಜಿ ವಜಾ.

ಬೆಂಗಳೂರು(ಸೆ​​.23): ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಶನಿವಾರ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ. ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ಕೋರಿದ್ದರು. ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ....

ಶಾಲಾ ಕೊಠಡಿ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆ: ಬೆಚ್ಚಿಬಿದ್ದ ಸಿಬ್ಬಂದಿ, ವಿದ್ಯಾರ್ಥಿಗಳು.!

ಚಿತ್ರದುರ್ಗ: ಸರ್ಕಾರಿ ಪ್ರೌಢಶಾಲೆಯ ಕಾರ್ಯಾಲಯದ ಮುಂಭಾಗದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಶನಿವಾರ ಬೆಳಗ್ಗೆ ತರಗತಿಗೆ ಧಾವಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ, ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಕಂಡು ಬೆಚ್ಚಿಬಿದ್ದಿದ್ದಾರೆ. ಈ ಕೃತ್ಯವನ್ನು ಯಾರು ಮಾಡಿದ್ದಾರೆಂದು...

ಮೇಲ್ದರ್ಜೆಗೇರಿದ ಶಾಲಾಶಿಕ್ಷಕರು; ಮೂರು ತಿಂಗಳಿನಿಂದ ವೇತನವಿಲ್ಲದೇ ಕಂಗಾಲು.

ಬೆಳಗಾವಿ: ಹಿರಿಯ ಪ್ರಾಥಮಿಕ ಶಾಲೆಗಳಿಂದ ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೇರಿರುವ ಬೆಳಗಾವಿ ಜಿಲ್ಲೆಯ ಶಾಲೆಗಳ 54 ಶಿಕ್ಷಕರು ಕಳೆದ ಮೂರು ತಿಂಗಳಿಂದ ವೇತನವಿಲ್ಲದೆ ಪರದಾಡುವಂತಾಗಿದೆ. ಸರಕಾರ 2022 ರಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 7 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 9 ಸೇರಿದಂತೆ ಒಟ್ಟು 16 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಿದೆ. ಆದರೆ, ಮೂರು ತಿಂಗಳ ಹಿಂದಿನವರೆಗೂ...

ಪಕ್ಷಾತೀತವಾಗಿ ಪ್ರತಿ ಶನಿವಾರ ಶಾಸಕರ ಭೇಟಿಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು ವಿಧಾನ ಪರಿಷತ್​ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ...

ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟ: ಶಾಸಕರ ಸಂಧಾನ ವಿಫಲ್.

ಖಾನಾಪುರ : ತಾಲ್ಲೂಕಿನ ತೋಪಿನಕಟ್ಟಿ ಗ್ರಾಮದಲ್ಲಿ ಶುಕ್ರವಾರ ಮರಾಠಾ ಮತ್ತು ಪರಿಶಿಷ್ಟ ಸಮುದಾಯದ ಯುವಕರ ಮಧ್ಯೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ಮಾಡಲಾಗಿದೆ. ಕೆಲವರಿಗೆ ಗಾಯಗಳಾಗಿದ್ದು, ಪೊಲೀಸರು ಲಾಠಿ ಪ‍್ರಹಾರ ಮಾಡಿದ್ದಾರೆ. ಘಟನೆಯಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. 'ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎರಡೂ ಗುಂಪುಗಳ ತಲಾ 40...

ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಮಾಡಿದಕ್ಕೆ ಬಿಜೆಪಿಗೆ ಹಿನ್ನಡೆ: ಮೃತ್ಯುಂಜಯ ಸ್ವಾಮೀಜಿ

ಸಿಂದಗಿ : ಸತ್ಯಾಗ್ರಹ, ಹೊಸ ತಾತ್ವಿಕತೆಗೆ ಮುನ್ನುಡಿ, ಉಪವಾಸ ಸತ್ಯಾಗ್ರಹಕ್ಕೆ ಸಿಂದಗಿಯ ಕೊಡುಗೆ ಸಿಂಹಪಾಲು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಗಳು ನುಡಿದರು. ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ, ಜಗದ್ಗುರುಗಳ ಸಾನ್ನಿಧ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಉಪ ಮೀಸಲಾತಿಗಳನ್ನು ಕೇಂದ್ರ...

ಕಾಲೇಜು ವಿದ್ಯಾರ್ಥಿನಿಯರಿಬ್ಬರು ಕೆಳಗೆ ಬಿದ್ದರೂ ಬಸ್‌ ನಿಲ್ಲಿಸದ ಡ್ರೈವರ್: ರಸ್ತೆ ತಡೆದು ಪ್ರತಿಭಟನೆ

ಬೆಳಗಾವಿ: ಬಸ್‌ನಿಂದ ವಿದ್ಯಾರ್ಥಿನಿಯರಿಬ್ಬರು ಕೆಳಗೆ ಬಿದ್ದರೂ ಚಾಲಕ ಬಸ್ ನಿಲ್ಲಿಸದಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ಬಸ್ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡು, ರಸ್ತೆ ತಡೆದು ಪ್ರತಿಭಟಿಸಿದ ಘಟನೆ ಶುಕ್ರವಾರ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಜರುಗಿದೆ. ಬೆಳಗಾವಿ-ತಿಗಡಿ ಮಾರ್ಗದ ಬಸ್ ಮೊದಲೇ ಪ್ರಯಾಣಿಕರಿಂದ ತುಂಬಿತ್ತು. ಬೆಣಚಿನಮರಡಿ, ಗಿರಿಯಾಲ, ತಿಗಡಿ ಗ್ರಾಮಗಳಿಗೆ ಹೋಗುವ ವಿದ್ಯಾರ್ಥಿಗಳೆಲ್ಲ ಈ ಬಸ್ ಹತ್ತಿದ್ದಾರೆ....

ಲೋಕಸಭೆಯಲ್ಲಿ ಮುಲ್ಲಾ, ಭಯೋತ್ಪಾದಕ : ಡ್ಯಾನಿಶ್‌ ಅಲಿಗೆ ಬಿಜೆಪಿ ಸಂಸದನಿಂದ ನಿಂದನೆ.

ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸದ ಡ್ಯಾನಿಶ್ ಅಲಿ ಅವರನ್ನು ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಲೋಕಸಭೆಯಲ್ಲಿ ಮುಲ್ಲಾ, ಭಯೋತ್ಪಾದಕ ಎಂದು ಕರೆಯುವ ಮೂಲಕ ನಿಂದಿಸಿದ್ದಾರೆ. ಲೋಕಸಭೆಯಲ್ಲಿ ಚಂದ್ರಯಾನದ ಯಶಸ್ಸು ಕುರಿತು ಚರ್ಚೆಯ ಸಂದರ್ಭದಲ್ಲಿ ರಮೇಶ್‌ ಬಿಧುರಿ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ. ರಮೇಶ್‌ ಬಿಧುರಿ ಹೇಳಿಕೆಯ ವಿರುದ್ಧ ಸ್ಪೀಕರ್‌ ಓಂ ಬಿರ್ಲಾ ಸಿಟ್ಟಾಗಿದ್ದು...

ಪೊಲೀಸರಿಂದ ಎಸ್ಕೇಪ್‌ಗೆ ಯತ್ನ: ಕೈಕಾಲು ಮುರಿದುಕೊಂಡ ಬಿಜೆಪಿ ಕಾರ್ಯಕರ್ತ.

ಕಲಬುರಗಿ: ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಲು ಯತ್ನಿಸಿ 2ನೇ ಮಹಡಿಯಿಂದ ಜಿಗಿದು ಬಿಜೆಪಿ ಕಾರ್ಯಕರ್ತನೊಬ್ಬ  ಕೈಕಾಲು ಮುರಿದುಕೊಂಡ ಘಟನೆ ಕಲಬುರಗಿ  ನಗರದಲ್ಲಿ ನಡೆದಿದೆ.ಅಫಜಲಪುರ  ತಾಲೂಕಿನ ಮಾಶಾಳ ಗ್ರಾಮದ ಮಹಾಂತೇಶ್ ಎಸ್ಕೇಪ್ ಆಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತ. ಹೋಟೆಲ್‌ನಲ್ಲಿ ಊಟ ಮಾಡಿ ಕಿಚನ್‌ನಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, 2ನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾನೆ. ವಿದ್ಯುತ್ ಬಿಲ್ ವಿಚಾರಕ್ಕೆ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!