Friday, September 20, 2024

ಸುದ್ದಿ-ಸದ್ದು ನ್ಯೂಸ್

ಚೈತ್ರಾ ಕುಂದಾಪುರಳ ಕೋಟ್ಯಾಂತರ ರೂ ಆಸ್ತಿ, ಲಕ್ಷಾಂತರ ರೂ ಬೆಲೆಬಾಳುವ ಚಿನ್ನ ಹಾಗೂ 40 ಲಕ್ಷ ರೂ ನಗದು ವಶ.

ಉಡುಪಿ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರು. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಆಕೆ ಆಪ್ತನ ಹೆಸರಲ್ಲಿ ಸಹಕಾರಿ ಬ್ಯಾಂಕ್‌ನಲ್ಲಿ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 40 ಲಕ್ಷ ರೂ. ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.  ಜೊತೆಗೆ 1.08 ಕೋಟಿ...

ಪ್ರೀತಿಸಿ ಮಾಡಬಾರದು ಮಾಡಿ ಕೈಕೊಟ್ಟ ಪೊಲೀಸಪ್ಪ..! ಮಹಿಳಾ ಪೇದೆ ದೂರು

ಬೆಳಗಾವಿ: ಬೆಂಗಳೂರು ಗೋವಿಂದಪುರ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಗ್ರಾಮದ ಆನಂದ ಪಾಟೀಲ ವಿರುದ್ಧ ನಂಬಿಕೆ ದ್ರೋಹ ಹಾಗೂ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯದ ನಿಮಿತ್ತವಾಗಿ ಮಹಿಳಾ ಪೇದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದಾನೆ. ನಂತರದ ದಿನಗಳಲ್ಲಿ ಇವರಿಬ್ಬರ ನಡುವೆ ವಾಟ್ಸಾಪ್‌ ಮೆಸೇಜ್‌, ವಿಡಿಯೋ ಕಾಲ್ ಮೂಲಕ...

ಬಿಜೆಪಿ ಸಂಸದ ಚೈತ್ರಾ ಕುಂದಾಪುರ‍‍ಳಿಂದ ಕೋಟಿ ರೂ. ಕೇಳಿದ್ರಾ…?

ವಿಜಯಪುರ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಅವರಿಂದ ತಾವು ಹಣ ಕೇಳಿರುವ ಆರೋಪಗಳ ಕುರಿತು ಸಂಸದ ರಮೇಶ್ ಜಿಗಜಿಣಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕೆ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಜಿಗಜಿಣಗಿ ಹೇಳಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚೈತ್ರಾ ಕುಂದಾಪುರ ಯಾರು, ಆಕೆಯ ಊರು ಯಾವುದೆಂದೇ...

ಚೈತ್ರಾ ಕುಂದಾಪುರ ಟಿಕೆಟ್‌ ವಂಚನೆ ಬಹಿರಂಗಕ್ಕೂ ಮೊದಲೇ ದೂರು ನೀಡಿದ್ದ ಹಾಲಶ್ರೀ ಸ್ವಾಮೀಜಿ

ಬೆಂಗಳೂರು: ಬಿಜೆಪಿ ಟಿಕೆಟ್‌ ವಂಚನೆ ಕೃತ್ಯ ಬೆಳಕಿಗೆ ಬರುವ ಮುನ್ನವೇ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ ಪೂಜಾರಿ ವಿರುದ್ಧವೇ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬಳ್ಳಾರಿ ಜಿಲ್ಲೆ ಹಡಗಲಿಯ ಹಾಲಶ್ರೀ ಸ್ವಾಮೀಜಿ ದೂರು ನೀಡಿದ್ದ ಸಂಗತಿ ತಡವಾಗಿ ಬಯಲಾಗಿದೆ. ಆದರೆ ಹಾಲಶ್ರೀ ನೀಡಿದ್ದ ದೂರನ್ನು ಗಂಭೀರ ಸ್ವರೂಪವಲ್ಲದ ಕೃತ್ಯ...

ಕುಡಚಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..! ಐವರ ವಿರುದ್ಧ ಕೇಸ್.

ಬೆಳಗಾವಿ: ರಾಯಬಾಗ ತಾಲೂಕಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸಿಇಎನ್ ಇನ್ಸ್‌ಪೆಕ್ಟರ್ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಅಂತಾರಾಜ್ಯದಿಂದ ಯುವತಿಯರ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖದೀಮರು ಅಂದರ್...

ಗಡಿ ರೇಖೆ ದಾಟುತ್ತಿದ್ದ ಮೂವರು ಉಗ್ರರ ಹತ್ಯೆ; ಪಾಕ್ ಸೇನೆಯಿಂದ ಒಬ್ಬನ ದೇಹಕ್ಕೆ ಕಾವಲು!

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತದ ಗಡಿ ಒಳಗೆ ನುಸುಳುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಶನಿವಾರ ಹೊಡೆದುರುಳಿಸಿದೆ.ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಒಸಿ) ದಾಟಲು ಈ ಉಗ್ರರು ಪ್ರಯತ್ನಿಸುತ್ತಿದ್ದರು. ಸೇನೆ, ಪೊಲೀಸ್ ಹಾಗೂ ಗುಪ್ತಚರ ದಳಗಳು ಬಾರಾಮುಲ್ಲಾ ಜಿಲ್ಲೆಯ ಉರಿ ವಲಯದಲ್ಲಿ...

ಯುವತಿಯ ಮೊಬೈಲ್‌ಗೆ ಖಾಸಗಿ ವಿಡಿಯೋ ಕಳುಹಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್‌..! ಇಬ್ಬರು ಆರೋಪಿಗಳು ಬಂಧನ.

ಬೆಂಗಳೂರು(ಸೆ.16):  ಯುವತಿಯ ಮೊಬೈಲ್‌ಗೆ ಖಾಸಗಿ ವಿಡಿಯೋ ಕಳುಹಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಖಾಸಗಿ ಹೋಟೆಲ್‌ನ ಪಾಲುದಾರರಾದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಕಿರಣ್‌ (28) ಮತ್ತು ನಯನಾ (44) ಬಂಧಿತರು. 22 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು...

ಸಾವಿರ ಜನರ ವಿರುದ್ಧ ಎಫ್‌ಐಆರ್ ; ಬಂಧನ ಭೀತಿಯಲ್ಲಿ ಊರನ್ನೇ ಬಿಟ್ಟ ಗ್ರಾಮಸ್ಥರು…!

ಕೋಲಾರ: ಕಳೆದ 2 ದಿನಗಳ ಹಿಂದೆ ನಡೆದ ಆ ಒಂದು ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಯಾರನ್ನು ಯಾವಾಗ ಪೊಲೀಸರು ಬಂಧಿಸ್ತಾರೋ ಅನ್ನೋ ಆತಂಕದಲ್ಲಿ ಊರಿಗೆ ಊರೇ ಖಾಲಿಯಾಗಿದೆ. ಜನರು ಆ ಗ್ರಾಮವನ್ನೇ ತೊರೆದಿದ್ದು, ಅಲ್ಲಿ ಸ್ಮಶಾನ ಮೌನ ಆವರಿಸಿದೆ. ಬಿಕೋ ಎನ್ನುತ್ತಿರುವ ಗ್ರಾಮ, ಪೊಲೀಸರಿಂದ ಗ್ರಾಮದಲ್ಲಿ ಮೊಕ್ಕಾಂ, ಗ್ರಾಮಕ್ಕೆ ಗ್ರಾಮವನ್ನೇ ತೊರೆದಿರುವ ಗ್ರಾಮಸ್ಥರು....

ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ; ಸಚಿವ ಸತೀಶ್‌ ಜಾರಕಿಹೊಳಿ ಘೋಷಣೆ.

ಬೆಂಗಳೂರು: ಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ. ಇಲ್ಲಿಯವರೆಗೆ ಈ ರೂಲ್ಸ್ ಇರಲಿಲ್ಲ. ಹೊಸದಾಗಿ ಜಾರಿ ಮಾಡುತ್ತಾ ಇದ್ದೇವೆ. ಗುತ್ತಿಗೆದಾರರಿಗೆ ಆ ಹೊಣೆ ನೀಡಲಾಗುವುದು. ಇನ್ನು ಟೆಂಡರ್ ಕರೆಯುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ...

ಕೋಟ್ಯಾಂತರ ರೂಪಾಯಿ ವಂಚನೆ..! ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಏನಿದೆ…..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂ. ವಂಚಿಸಿರುವ ಆರೋಪದಡಿ ಪ್ರಚೋದನಾಕಾರಿ ಭಾಷಣಕಾರ್ತಿ ಹಾಗೂ ಹಿಂದೂ ಫೈಯರ್‌ ಬ್ರ್ಯಾಂಡ್‌  ಖ್ಯಾತಿಯ  ಚೈತ್ರಾ ಕುಂದಾಪುರ ಸೇರಿದಂತೆ ಈ ಕೃತದಲ್ಲಿ ಭಾಗಿಯಾದ 07 ಜನರನ್ನು ಬೆಂಗಳೂರು ಸಿಸಿಬಿ ವಿಭಾಗದ ಪೊಲೀಸರು ಮಂಗಳವಾರ ಉಡುಪಿಯಲ್ಲಿ ಬಂಧಿಸಿದ್ದಾರೆ. ಕೇಂದ್ರದ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!