Saturday, September 21, 2024

ಸುದ್ದಿ-ಸದ್ದು ನ್ಯೂಸ್

ಮಹಿಳೆಯರ ಹೆಸರಲ್ಲಿ ಖಾತೆ,  ಬೆತ್ತಲೆ ವಿಡಿಯೋ ಕಾಲ್ ಮಾಡುಲು ಒತ್ತಾಯ.

ಕೊಯಮತ್ತೂರು(ಡಿ. 13) ಕಾಲೇಜು ವಿದ್ಯಾರ್ಥಿನಿಯೊಬ್ಬಳು ದೂರು ಸಲ್ಲಿಸಿದ್ದಾಳೆ.  23 ವರ್ಷದ ಯುವಕ  ಬೆತ್ತಲೆ ವಿಡಿಯೋ ಕಾಲ್ ಮಾಡು ಇಲ್ಲವಾದರೆ ಮಾರ್ಪ್ ಮಾಡಿರುವ ನಗ್ನ ಪೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾಕ್ಕೆ ಅಪ್ ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ. ಯುವತಿಯ ದೂರಿನ ಆಧಾರದಲ್ಲಿ ಪೊಲೀಸರು ಎನ್ ನಿಯಾಜ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.ಕೊಯಮತ್ತೂರು ನಗರದ...

ದಿವ್ಯ ಕಾಶಿ ಭವ್ಯ ಕಾಶಿ’ ಉದ್ಘಾಟನೆ: ದೇಶದಾದ್ಯಂತಕಾರ್ಯಕ್ರಮ ನೇರ ಪ್ರಸಾರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ಕ್ಷೇತ್ರದ ಪುನರುಜ್ಜೀವನಕ್ಕಾಗಿ ಕೈಗೊಂಡ ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ "ದಿವ್ಯ ಕಾಶಿ ಭವ್ಯ ಕಾಶಿ' ಇಂದು ಸೋಮವಾರ  ಉದ್ಘಾಟನೆ. ಸಮಾರಂಭವನ್ನು ವೀಕ್ಷಿಸಲು ದೇಶದಾದ್ಯಂತ ಸುಮಾರು 51,000 ಸ್ಥಳಗಳಲ್ಲಿ ಬೃಹತ್ ಪ್ರಮಾಣದ ಎಲ್‍ಇಡಿ ಪರದೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ "ದಿವ್ಯ ಕಾಶಿ, ಭವ್ಯ ಕಾಶಿ" ಕಾರ್ಯಕ್ರಮ ನೇರ ಪ್ರಸಾರವಾಗಲಿದೆ....

ಮತ್ತೊಬ್ಬನ ಜೊತೆ ಲವ್ವಿ ಡವ್ವಿ : ಹೊಡೆದು ಕೊಂದ ಗಂಡ

ಬೆಳಗಾವಿ: ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದಲ್ಲಿ ಭಾನುವಾರ ಯುವಕನೊಬ್ಬನ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಸಾವನ್ನಪ್ಪಿದ್ದಾನೆ. ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧವೇ ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ಯುವಕನನ್ನು ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ನಿವಾಸಿ ಅರ್ಜುನ್ ಮಾರುತಿ ನಾಗಡೆ (30) ಎಂದು ಗುರುತಿಸಲಾಗಿದೆ. ಕಳೆದ ಐದು ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದು, ಪೋಷಕರು ರಾಯಬಾಗ ಪೊಲೀಸ್...

21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ! ಚಂಡೀಗಢದ ಹರ್ನಾಜ್​ ಸಂಧು 2021ರ ವಿಶ್ವ ಸುಂದರಿ

2021 ರ ಮಿಸ್​ ಯುನಿವರ್ಸ್​ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್​ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್​ನ ಐಲಾಟ್​ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್​ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ...

ಬಾಳೆಹಣ್ಣು ಬೇಡವಾದರೆ ಶೇಂಗಾ ಚಕ್ಕೆ ಮತ್ತು ರುಚಿಯಾದ ಊಟ: ಬಿ ಸಿ ನಾಗೇಶ

ಬೆಳಗಾವಿ(ಡಿ.13): ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ 1ರಿಂದ 8ನೇ ತರಗತಿವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡುತ್ತಿರುವ ಕೋಳಿಮೊಟ್ಟೆ/ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇನ್ನು ಯೋಜನೆಯಲ್ಲಿ ಸದ್ಯದಲ್ಲೇ ಹೊಸ ಆಯ್ಕೆಯಾಗಿ ಕೆಎಂಎಫ್‌ನ ಶೇಂಗಾ ಚಕ್ಕೆ ಮಿಠಾಯಿ ಕೂಡ ಸೇರಿಕೊಳ್ಳಲಿದೆ. ಅಂದರೆ ಬಾಳೆಹಣ್ಣು ಬೇಡವಾದರೆ ಮಕ್ಕಳು...

ಇಂದಿನಿಂದ ಬೆಳಗಾವಿ ಅಧಿವೇಶನ: ನಡೆಯಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚಿಂತನ- ಮಂಥನ

ವರದಿ: ಉಮೇಶ ಗೌರಿ ಬೆಳಗಾವಿ:ಬೆಳಗಾವಿಯಲ್ಲಿ ಇಂದಿನಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಕಿತ್ತೂರು ಕರ್ನಾಟಕ ಘೋಷಣೆ ಫಲದ ಜತೆಗೆ ಇದೇ ಭಾಗದ ರೈತರ ಸಮಸ್ಯೆ , ಪ್ರವಾಹ ಸಂತ್ರಸ್ತರ ಸಂಕಟ, ನಿರುದ್ಯೋಗ ಸಮಸ್ಯೆಗಳು ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವಾರು ಸಮಸ್ಯೆಗಳಿಗೆ ಸಿಗಬೇಕಿದೆ ಪರಿಹಾರ. ಶಿಕ್ಷಣ ಕ್ಷೇತ್ರ: ಶಿಕ್ಷಣ ಕ್ಷೇತ್ರವನ್ನು ಇನ್ನಷ್ಟೂ ಸಬಲೀಕರಣಗೊಳಿಸುವತ್ತ ಒಲವು ತೋರಬೇಕು. ಕೊಠಾರಿ ಆಯೋಗದ...

ಜೆಡಿಎಸ್ ಮಾಜಿ ಶಾಸಕ ಕೋನರೆಡ್ಡಿ ನಾಳೆ ಕಾಂಗ್ರೆಸ್‍ಗೆ ಸೇರ್ಪಡೆ

ಧಾರವಾಡ(ಡಿ.12): ಜಿಲ್ಲೆಯ ಮಾಜಿ ಶಾಸಕರೊಬ್ಬರು ಈಗ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಜೆಡಿಎಸ್‍ನ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ಅವರು ನಾಳೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ತಾರೆ ಎಂದು ಮಾಹಿತಿ ಇತ್ತು. ಅಲ್ಲದೇ ಕೋನರೆಡ್ಡಿ ವಿಧಾನ ಪರಿಷತ್ ಚುನಾವಣೆಯಲ್ಲಿ ನವಲಗುಂದ ಕ್ಷೇತ್ರದಲ್ಲಿ ಓಡಾಡಿ...

ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ : ಸತೀಶ ಜಾರಕಿಹೊಳಿ

ಬೆಳಗಾವಿ : ಮುಂದಿನ ಚುನಾವಣೆ ಗೋಕಾಕನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಡೋಣ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ರಮೇಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುವುದು ಯಾರಿಗೂ ಅರ್ಥವಾಗಿಲ್ಲ. ನಾವು ಯಾವುದೇ ಚುನಾವಣೆಯನ್ನು ಕೇಂದ್ರಿಕೃತ ಮಾಡಿಲ್ಲ, ಸ್ವತಂತ್ರವಾಗಿಯೇ...

ನಾನು ಹಿಂದೂ, ಹಿಂದುತ್ವವಾದಿ ಅಲ್ಲ: ರಾಹುಲ ಗಾಂಧಿ

ನವದೆಹಲಿ, ಡಿ. 12: ಭಾರತವು ಹಿಂದೂಗಳ ದೇಶವೇ ಹೊರತು ಯಾವುದೇ ಪರಿಸ್ಥಿತಿಯಲ್ಲಿ ಅಧಿಕಾರದಲ್ಲಿರಲು ಬಯಸುವ ಹಿಂದುತ್ವವಾದಿಗಳದ್ದಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಅಲ್ಲದೆ ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ದೇಶದಲ್ಲಿ ಹಣದುಬ್ಬರ ಸೃಷ್ಠಿಸಿದ್ದಾರೆ. ಇದರಿಂದ ದೇಶವಾಸಿಗಳು ಸಂಕಷ್ಟ ಎದುರಿಸುವಂತಾಗಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ನಿತ್ಯ...

ಎಷ್ಟೋ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

ಬೆಂಗಳೂರು: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದರು ಆಗ ನಾವೇನಾದರೂ ಮಾತನಾಡಿದ್ವಾ ಎಂದು ಪ್ರಶ್ನಿಸುವ ಮೂಲಕ ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ  ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ಮತಾಂತರ ನಿಷೇಧ ತಡೆ ಬಿಲ್ ಬರುತ್ತಿದೆ. ಬಲವಂತವಾಗಿ ಮತಾಂತರ ಮಾಡಬಾರದು ಅಂತ ಸಂವಿಧಾನದಲ್ಲೇ ಇದೆ. ಹಾಗಿದ್ದರೂ ಈ...

About Me

1089 POSTS
0 COMMENTS
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!