Sunday, September 8, 2024

ಜಿಲ್ಲೆ

ತಿಗಡೊಳ್ಳಿಯ ಯುವಕನ ಕೊಲೆ ಕೇಸ್: ಬೆಳಗಾವಿ ಎಸ್​ಪಿ. ಭೀಮಾಶಂಕರ ಗುಳೇದ ಹೇಳಿದ್ದೇನು?

ಬೆಳಗಾವಿ: ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ 2023 ಸೆ. 17 ರವಿವಾರ ದಿನ ಇಬ್ಬರು ಪರಸ್ಪರ ಹೊಡೆದಾಡಿಕೊಂಡು ಅದರಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ಸರಕಾರಿ ನೌಕರರಿಂದ ಒಪಿಎಸ್ ಮರು ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬೈಕ್ ರ‍್ಯಾಲಿ.

ಬೆಳಗಾವಿ: ಹೊಸ ಪಿಂಚಣಿ ಬದಲಾಗಿ ಹಳೆ ಪಿಂಚಣಿ ಜಾರಿ ಸೇರಿದಂತೆ  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಶಿಕ್ಷಕರು ಬೈಕ್ ರ‍್ಯಾಲಿ ನಡೆಸಿದರು. ಐದು ವರ್ಷ ಜನಪ್ರತಿನಿಧಿಗಳಾಗುವ ಶಾಸಕರು, ಸಂಸದರಿಗೆ ಇರುವ ಪಿಂಚಣಿ ನಮಗೆ ಯಾಕಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಖಿಲ ಭಾರತ ಶಿಕ್ಷಕರ ಫೆಡರೇಶನ್​​ದಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗೆ...

ಡಾಂಬರು ರಸ್ತೆ ಮೇಲೆ ಎಸೆದು ಹಸುಗೂಸು ಕಂದನ ಕೊಂದ ಪೊಲೀಸ್.!

ಬೆಳಗಾವಿ: ವೃತ್ತಿಯಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಆಗಿರುವ ವ್ಯಕ್ತಿಯೊಬ್ಬ​ ತನ್ನ 4 ತಿಂಗಳ ಮಗುವನ್ನು ಡಾಂಬರು ರಸ್ತೆಗೆಸೆದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆಯ ಮುಡಲಗಿ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸ್​ ಕಾನ್​ಸ್ಟೆಬಲ್​ ಬಸಪ್ಪ ಬಳುಣಕಿ ತನ್ನ ಮಗುವನ್ನೇ ಕೊಂದ ಆರೋಪಿ. ಈತ ಡಾಂಬರು ರಸ್ತೆಗೆಸೆದು ಕೊಲೆ...

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮೊಬೈಲ್‌ ಬಳಕೆ ವಿಚಾರಕ್ಕೆ ಕೈದಿಗಳ ನಡುವೆ ಮಾರಾಮಾರಿ!

ಬೆಳಗಾವಿ(ಸೆ.19): ತಿಂಗಳ ಹಿಂದೆಯಷ್ಟೇ ಇಬ್ಬರು ಕೈದಿಗಳ ನಡುವೆ ಜಗಳ ನಡೆದ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಗೃಹದಲ್ಲಿ  ಮತ್ತೆ ಮಾರಾಮಾರಿ ನಡೆದಿದೆ. ಮೊಬೈಲ್‌ ಫೋನ್‌ ಬಳಕೆ ವಿಚಾರಕ್ಕೆ ಇಬ್ಬರು ಕೈದಿಗಳ ನಡುವೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ವಿಚರಣಾಧೀನ ಕೈದಿ ವಾಸುದೇವ ನಾಯ್ಕ್ (34) ಗಾಯಗೊಂಡಿದ್ದಾನೆ. ಈತನಿಗೆ ಹಿಂಡಲಗಾ ಜೈಲಿನರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಳ್ಳತನ ಪ್ರಕರಣದಲ್ಲಿ ವಾಸುದೇವ...

ಬೆಳಗಾವಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್.

ಬೆಳಗಾವಿ: ಬೆಳಗಾವಿ  ಮಹಾನಗರದಲ್ಲಿ ಹೊಸತನ ಬಯಸುವ ಶಾಸಕ ಅಭಯ ಪಾಟೀಲ ಈಗ ಬೆಳಗಾವಿಯ ಸೌಂದರ್ಯ ಹೆಚ್ಚಿಸಿ ಪಕ್ಕದ ರಾಜ್ಯಗಳ ಪ್ರವಾಸಿಗರನ್ನು ಆಕರ್ಷಿಸುವ ಕೇಬಲ್ ಕಾರ್ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಳ್ಳೂರು ಗ್ರಾಮದಿಂದ ರಾಜಹಂಸಗಡ ವರೆಗೆ ಕೇಬಲ್ ಕಾರ್...

ತಿಗಡೊಳ್ಳಿ ಗ್ರಾಮ ಪಂಚಾಯತಿ ಸದಸ್ಯನಿಂದ ಹಳೇ ವೈಷಮ್ಯಕ್ಕಾಗಿ ಯುವಕನೊರ್ವನ ಕೊಲೆ..!

ಚನ್ನಮ್ಮನ ಕಿತ್ತೂರು : ಹಳೆ ವೈಷಮ್ಯದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯೋರ್ವನ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ರವಿವಾರ ತಡರಾತ್ರಿ ನಡೆದಿದೆ. ವಿಜಯ ರಾಮಚಂದ್ರ ಆರೇರ (32) ಮೃತ ಯುವಕನಾಗಿದ್ದು, ಕಲ್ಲಪ್ಪ ಸದೆಪ್ಪಾ ಕ್ಯಾತನವರ (48) ಕೊಲೆ ಆರೋಪಿಯಾಗಿದ್ದಾನೆ. ತಿಗಡೊಳ್ಳಿ ಗ್ರಾಮದ ವಿಜಯ್ ರಾಮಚಂದ್ರಪ್ಪ ಆರೇರ್(32) ಕೊಲೆಯಾದ...

ಕುಡಚಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ..! ಐವರ ವಿರುದ್ಧ ಕೇಸ್.

ಬೆಳಗಾವಿ: ರಾಯಬಾಗ ತಾಲೂಕಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕುಡಚಿ ಪಟ್ಟಣದ ಶಿವಶಕ್ತಿ ಲಾಡ್ಜ್ ಮೇಲೆ ಸಿಇಎನ್ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸಿಇಎನ್ ಇನ್ಸ್‌ಪೆಕ್ಟರ್ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಅಂತಾರಾಜ್ಯದಿಂದ ಯುವತಿಯರ ಕರೆಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಖದೀಮರು ಅಂದರ್...

ಸೋಮೇಶ್ವರ ಶುಗರ್ ಫ್ಯಾಕ್ಟರಿ ಎಲೆಕ್ಷನ್; ಗೆದ್ದು ಬೀಗಿದ ಬಾಳೇಕುಂದರಗಿ ಪೆನೆಲ್!

ಬೈಲಹೊಂಗಲ: ಬೈಲಹೊಂಗಲ ಭಾಗದ ರೈತರ ಒಡನಾಡಿ ಶ್ರೀ ಸೋಮೇಶ್ವರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನವಣೆಯ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಒಂದು ತಿಂಗಳಿನಿಂದ ತೀರ ಕುತೂಹಲ ಕೆರಳಿಸಿದ್ದ ಕಾರ್ಖಾನೆಯ ಆಡಳಿತ ಮಂಡಿಳಿಗೆ ಸೆ.10ರಂದು ಚುನಾವಣೆ ನಡೆದು ಹೊರಬಿದ್ದ ಫಲಿತಾಂಶದಲ್ಲಿ ಬಾಳೇಕುಂದರಗಿ ಸಹಕಾರ ಪೆನೆಲ್ ವಿಜಯಪತಾಕೆ ಹಾರಿಸಿದೆ. ಆಡಳಿತ ಮಂಡಳಿಯ 17 ಸ್ಥಾನಗಳಿಗೆ ನಡೆದ...

ಪಂಚಮಸಾಲಿ ಮೀಸಲಾತಿಗಾಗಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ : ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂದು ಪಕ್ಷಾತೀತವಾಗಿ ಹೋರಾಟ ಮಾಡಿದ್ದೇವೆ. ಸಮಾಜದ ಮತ್ತು ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೇನೆ. ಈಗ ಸಮಾಜ ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅವಕಾಶ ಇದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ನಿಪ್ಪಾಣಿಯಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿ,...

ಸಿಎಂ ಭರವಸೆ ಹುಸಿ.! ಮತ್ತೆ ಮೀಸಲಾತಿಗೆ ಸ್ವಾಮೀಜಿ ಹೋರಾಟ: ವಿನಯ್​ ಕುಲಕರ್ಣಿ

ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಹಾಗೂ ಕೆಲವು ಕಾನೂನು ತೊಡಕನ್ನು ಸರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಸಮಾಜದಿಂದ ಮನವಿ ಮಾಡಲಾಗಿತ್ತು. ಅಧಿವೇಶನ ಮುಗಿದ ಬಳಿಕ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದು ಆ ಭರವಸೆ ಹುಸಿಯಾಗಿದೆ. ಇದರಿಂದಾಗಿ ಶ್ರೀಗಳು ನಿಪ್ಪಾಣಿಯಿಂದ ಹೋರಾಟ ಪ್ರಾರಂಭ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!