Sunday, September 8, 2024

ದೇಶ

ಕೌಶಲ್ಯಾಭಿವೃದ್ಧಿ ಹಗರಣದ ಹಿನ್ನಲೇ ಆಂಧ್ರದ ಮಾಜಿ ಸಿಎಂ ʼಚಂದ್ರಬಾಬು ನಾಯ್ಡುʼಗೆ 14 ದಿನಗಳ ನ್ಯಾಯಾಂಗ ಬಂಧನ

ವಿಜಯವಾಡ (ಆಂಧ್ರಪ್ರದೇಶ): ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಆರೋಪಿಯಾಗಿ ಆಂಧ್ರಪ್ರದೇಶ ಸಿಐಡಿ ಪೊಲೀಸರ ಬಂಧನದಲ್ಲಿರುವ ಮಾಜಿ ಸಿಎಂ, ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರಿಗೆ ಎಸಿಬಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಅವರನ್ನು ರಾಜಮಂಡ್ರಿಯ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗುವುದು ಎಂದು ವರದಿಯಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಎನ್ ಚಂದ್ರಬಾಬು...

ಬಿಜೆಪಿ ಪಕ್ಷದ ಜನಾಶೀರ್ವಾದ್ ಯಾತ್ರೆಗೆ ಅಹ್ವಾನ ನೀಡಿದರೂ ಹೋಗುವುದಿಲ್ಲ: ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ

ನವದೆಹಲಿ: ಮಧ್ಯಪ್ರದೇಶದಲ್ಲಿ ತಮ್ಮದೇ ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ಜನಾಶೀರ್ವಾದ್ ಯಾತ್ರೆಗೆ ಆಹ್ವಾನಿಸದಿದ್ದಕ್ಕೆ ನಿರಾಶೆ ವ್ಯಕ್ತಪಡಿಸಿದ್ದ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಇದೀಗ ಯಾತ್ರೆಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಉಮಾಭಾರತಿ ಅವರ ಹೇಳಿಕೆ ಪಕ್ಷದೊಳಗೆ ಬಿರುಗಾಳಿ ಎಬ್ಬಿಸಿದ್ದು, ಅವರು ಯಾತ್ರೆಯ ಸಮಯದಲ್ಲಿ ಹಾಜರಿದ್ದರೆ ಬಿಜೆಪಿ ನಾಯಕರು ಮುಜುಗರಕ್ಕೊಳಪಡಬೇಕಾಗುತ್ತದೆ ಎಂದು ಆಗ ಅಲ್ಲಿ...

ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್‌! ಇಸ್ರೋ

ನವದೆಹಲಿ: ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ,ತನ್ನ ಯೋಜನೆಯ ಉದ್ದೇಶಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ.ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹಾಪ್ ಪರೀಕ್ಷೆ (ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಆಜ್ಞೆಯ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಇಂಜಿನ್‌ಗಳನ್ನು ಹಾರಿಸಿತು, ನಿರೀಕ್ಷೆಯಂತೆ...

ಮರಾಠಾ ಮೀಸಲಾತಿಗಾಗಿ, ಕರ್ನಾಟಕದ 2 ಬಸ್ ಸೇರಿ 6 ಬಸ್​ಗಳಿಗೆ ಬೆಂಕಿ, 85 ಮಂದಿಗೆ ಗಾಯ

ಬೆಳಗಾವಿ: 'ಮರಾಠಾ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಶುಕ್ರವಾರ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಆರು ಬಸ್​​ಗಳಿಗೆ ಬೆಂಕಿ ಹಚ್ಚಲಾಗಿದೆ.ಇದರಲ್ಲಿ ಕರ್ನಾಟಕದ ಎರಡು ಬಸ್​​​​​ಗಳಿಗೂ ಬೆಂಕಿ ತಗುಲಿದ್ದು, ಸುಮಾರು 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ವಿವಿಧೆಡೆ ಮರಾಠಾ ಮೀಸಲಾತಿಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿವೆ. ಜಾಲನಾ...

ಇಸ್ರೋ ಸೂರ್ಯನ ಅಧ್ಯಯನಕ್ಕೆ ಇಂದು ಆದಿತ್ಯ-L1 ಉಡಾವಣೆ! ಭಾರತದತ್ತ ವಿಶ್ವದ ಚಿತ್ತ್.

ಬೆಂಗಳೂರು: ಚಂದ್ರನ ಕುತೂಹಲ ಭೇಧಿಸುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ಇದೀಗ ಸೂರ್ಯನ ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, ಯೋಜನೆ ಯಶಸ್ವಿಯಾಗುವಂತೆ ಕೋರಿ ದೇಶದಾದ್ಯಂತ ಹೋಮ-ಹವನ, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಸೂರ್ಯಯಾನ ಉಡಾವಣೆಯು ಶನಿವಾರ ಅಂದರೆ ಇಂದು ಬೆಳಗ್ಗೆ 11.50ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್...

ತಂಗಿಯ ಮೇಲೆ ನಿರಂತರ ಅತ್ಯಾಚಾರ! ದುಷ್ಟನಿಗೆ ರಕ್ಷಾ ಬಂಧನದಂದೇ ಶಿಕ್ಷೆ.

ಒಡಿಶಾ: ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದ ಅಣ್ಣನಿಗೆ ರಕ್ಷಾ ಬಂಧನದಂದೇ ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸಹೋದರಿಯ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ ಹಾಗೆಯೇ ಅವಳು 14 ವರ್ಷದವಳಿದ್ದಾಗ ಆಕೆ ಗರ್ಭಧರಿಸುವಂತೆ ಮಾಡಿ, ಬಳಿಕ ಗರ್ಭಪಾತ ಮಾಡಿಸಿರುವ ಆರೋಪದ ಮೇಲೆ ಒಡಿಶಾ ಹೈಕೋರ್ಟ್​ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಪರಾಧಿಯ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ...

ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ:ಅಧಿಕೃತ ಘೋಷಣೆ!

ನವದೆಹಲಿ: ಕಳೆದ ನಾಲ್ಕು ದಿನಗಳಿಂದ ಶುರುವಾಗಿದ್ದ ಸಿಎಂ ಸ್ಥಾನದ ಆಯ್ಕೆಯ ಹಗ್ಗ ಜಗ್ಗಾಟಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿ ಅಧಿಕೃತ ಮುದ್ರೆಯನ್ನು ಒತ್ತಿದೆ. ಕಳೆದ ಭಾನುವಾರದಿಂದ ಸಿಎಂ ಅಯ್ಕೆಯ ಕಸರತ್ತು ನಡೆಯುತ್ತಿತ್ತು. ಹೈಕಮಾಂಡ್ ಅಧಿಕಾರ ಹಂಚಿಕೆಯ ಸೂತ್ರವನ್ನರಿಸಿ ಸಿಎಂ...

ಕೊನೆಗೂ ರಾಷ್ಟ್ರೀಯ ಸ್ಥಾನಮಾನ ಗಿಟ್ಟಿಸಿಗೊಂಡ ಆಮ್ ಆದ್ಮಿ ಪಕ್ಷ.

ನವದೆಹಲಿ: ಕೇಜ್ರಿವಾಲ್ ಕನಸು ನನಸಾಗಿದೆ, 10 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದ ಆಮ್ ಆದ್ಮಿ ಪಕ್ಷಕ್ಕೆ  ರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಕರ್ನಾಟಕ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.  ಅತ್ತ ಕೇಜ್ರಿವಾಲ್ ಪಕ್ಷವಾದ AAPಗೆ ರಾಷ್ಟ್ರೀಯ...

ಸಿಎಂ ಕ್ಷೇತ್ರ ಸೇರಿದಂತೆ ಸುಮಾರು 30 – 40 ಕ್ಷೇತ್ರಗಳಲ್ಲಿ ಮರು ಸರ್ವೇ ನಡೆಸಲು ಬಿಜೆಪಿ ಹೈಕಮಾಂಡ್ ನಿರ್ಧಾರ.

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ, ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ಹೇಳಲಾಗಿತ್ತು. ಆದರೆ, ಪಟ್ಟಿಯನ್ನು ಇನ್ನೇನು ಬಿಡುಗಡೆ ಮಾಡಬೇಕು ಎನ್ನುವಷ್ಟರಲ್ಲಿ ಪಟ್ಟಿಯ ಪ್ರಕಟಣೆ ಮುಂದಕ್ಕೆ ಹೋಗಿದೆ. ಜೊತೆಗೆ, 224 ಕ್ಷೇತ್ರಗಳಿಗೂ ಸಂಪೂರ್ಣವಾಗಿ ಅಭ್ಯರ್ಥಿಗಳನ್ನು ಪ್ರಕಟಿಸದೇ, ಹಂತ ಹಂತವಾಗಿ ಪಟ್ಟಿಯನ್ನು ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಎಂ ಬೊಮ್ಮಾಯಿಯವರ ಕ್ಷೇತ್ರವಾದ ಶಿಗ್ಗಾಂವಿ ಕ್ಷೇತ್ರದಲ್ಲೂ...

ಪ್ರಧಾನಿ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ ಕೇಜ್ರಿವಾಲ್ ಗೆ ಹೈಕೋರ್ಟ್ ದಂಡ! ಪ್ರಧಾನಿಯವರ ಶೈಕ್ಷಣಿಕ ಅರ್ಹತೆಯನ್ನು ತಿಳಿದುಕೊಳ್ಳುವ ಹಕ್ಕು ದೇಶಕ್ಕೆ ಇಲ್ಲವೇ ಎಂದ ದೆಹಲಿ ಸಿಎಂ!

ನವದೆಹಲಿ: ನನ್ನ ದೇಶದ ಪ್ರಧಾನಿಯ ವಿದ್ಯಾರ್ಹತೆ ತಿಳಿಯುವ ಹಕ್ಕೂ ಕೂಡ ಇಲ್ಲವೇ ಎಂದು ಗುಜರಾತ್ ಹೈಕೋರ್ಟ್ ಆದೇಶದ ಬಗ್ಗೆ ದೆಹಲಿ ಸಿಎಂ ಹಾಗೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪರೋಕ್ಷ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಜತೆಗೆ ಅರ್ಜಿ ಹಾಕಿದ್ದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!