Tuesday, September 17, 2024

ರಾಜ್ಯ

ಪಂಚಾಯಿತಿಗೊಂದು ಸಾರಾಯಿ ಅಂಗಡಿ ಪ್ರಸ್ತಾಪ; ಪಾಪದ ದುಡ್ಡಲ್ಲಿ ಸರ್ಕಾರ ನಡೆಯೋದು ಬೇಡ: ಕಾಂಗ್ರೆಸ್‌ ಶಾಸಕ ಬಿ ಆರ್‌ ಪಾಟೀಲ್‌ ಕಿಡಿ

ಬೆಂಗಳೂರು: ಆದಾಯ ಕ್ರೋಡೀಕರಣಕ್ಕಾಗಿ ಗ್ರಾಮ ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯುವ ರಾಜ್ಯ ಸರಕಾರದ ಪ್ರಸ್ತಾವನೆಗೆ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಸದಸ್ಯರೇ ವಿರೋಧ ವ್ಯಕ್ತಪಡಿಸಿದ್ದಾರೆ. ''ಸರಕಾರ ನಡೆಸಲು ಹಣ ಕಡಿಮೆ ಬಿದ್ದರೆ ಜೋಳಿಗೆ ಹಿಡಿದು ಹಣ ಹೊಂದಿಸಿ ಕೊಡುತ್ತೇವೆ. ಆದರೆ, ಗ್ರಾಮ ಪಂಚಾಯಿತಿಗೊಂದು ಮದ್ಯದಂಗಡಿ ತೆರೆಯುವ ನಿರ್ಧಾರ ಮರುಪರಿಶೀಲನೆ ಮಾಡಬೇಕು,'' ಎನ್ನುವ ಮೂಲಕ ಆಳಂದ ಶಾಸಕ ಬಿ ಆರ್‌ ಪಾಟೀಲ್‌...

ಗಾಂಧೀಜಿ ಅವರನ್ನು ಗುಂಡಿಕ್ಕಿಕೊಂದವರನ್ನು ಆರಾಧಿಸುವವರು, ಪೂಜಿಸುವವರ ಬಗ್ಗೆ ಎಚ್ಚರದಿಂದ ಇರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು (ಅ.3) : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರನ್ನು ಗುಂಡಿಕ್ಕಿಕೊಂದವರನ್ನು ಆರಾಧಿಸುವವರು, ಪೂಜಿಸುವವರ ಬಗ್ಗೆ ಜನತೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರಧ್ವಜ ತಯಾರಿಸುವ ಧಾರವಾಡದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ‘ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ’ ಪ್ರದಾನ ಮಾಡಿ ಅವರು...

ಲಿಂಗಾಯತರಿಗೆ ಡಿಸಿಎಂ ಬೇಡ ಬದಲಾಗಿ ಸಿಎಂ ಸ್ಥಾನವೇ ನೀಡಿ:ಶ್ಯಾಮನೂರು ಶಿವಶಂಕರಪ್ಪ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತ ಸಮುದಾಯಕ್ಕೆ ಸೇರಿದವರನ್ನು ಸಿಎಂ ಮಾಡಬೇಕು ಎಂಬ ಚರ್ಚೆಯ ಬೆನ್ನಲ್ಲೇ ಲಿಂಗಾಯತ ಮುಖ್ಯಮಂತ್ರಿ ಚರ್ಚೆಯೂ ಮುನ್ನಲೆಗೆ ಬಂದಿದೆ. ಲಿಂಗಾಯತ ಸಮುದಾಯದ ಪರವಾಗಿ ಹಿರಿಯ ಕಾಂಗ್ರೆಸ್ ಮುಖಂಡ ಶ್ಯಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕಾಂಗ್ರೆಸ್‌ನಲ್ಲಿ ಹೊಸತೊಂದು ಕಿಡಿಯನ್ನು ಹೊತ್ತಿಸಿದೆ. ಕಾಂಗ್ರೆಸ್‌ನಲ್ಲಿ ದಲಿತ ಸಮುದಾಯದಕ್ಕೆ ಸೇರಿದವರನ್ನು ಸಿಎಂ ಮಾಡಬೇಕು ಎಂಬ ಬೇಡಿಕೆ ತೀವ್ರವಾಗಿತ್ತು. ಡಾ.ಜಿ ಪರಮೇಶ್ವರ್‌...

ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಆರೋಪದಡ ರೈತ ನಾಯಕಿ ಮಂಜುಳಾ ಪೂಜಾರಿ ವಿರುದ್ಧ FIR.

ಬೆಳಗಾವಿ: ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕುತ್ತಿದ್ದ ಆರೋಪದ ಮೇಲೆ ರೈತ ನಾಯಕಿ ಮಂಜುಳಾ ಪೂಜಾರಿ ವಿರುದ್ಧ ಗೋಕಾಕ್ ತಾಲೂಕಿನ ಮೂಡಲಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತೋಷ್ ಪಾಟೀಲ್ ಎನ್ನುವವರಿಗೆ ಜಮೀನು ಸಮಸ್ಯೆ ಬಗೆಹರಿಸಿ ಕೊಡುವುದಾಗಿ ಹೇಳಿ ಹಣ ವಸೂಲಿ ಮಾಡಿದ್ದಲ್ಲದೇ ಇನ್ನು ಹೆಚ್ಚಿನ ಹಣ ನೀಡುವಂತೆ ಮಂಜುಳಾ ಪೂಜಾರಿ ಬೆದರಿಕೆ ಹಾಕಿದ್ದರು ಎಂಬ...

ಮಿಸ್ಟರ್ ಡಿ.ಕೆ.ಶಿವಕುಮಾರ್. ನಿಮ್ಮ ಕಸನು ಈಡೇರುವುದಿಲ್ಲ: ಹೆಚ್.ಡಿ.ದೇವೇಗೌಡ

ರಾಮನಗರ.ಅ.2: ಜೆಡಿಎಸ್ ಪಕ್ಷವನ್ನು ಶೂನ್ಯ ಮಾಡಿಬಿಡುತ್ತೇನೆ. ಅಲ್ಲಿ ಒಬ್ಬ ಸಮರ್ಥ ನಾಯಕನನ್ನು ಇರಲು ಬಿಡಲ್ಲ ಎಂದು ಹೇಳಿದ್ದೀರಿ ಮಿಸ್ಟರ್ ಡಿ.ಕೆ.ಶಿವಕುಮಾರ್. ನಿಮ್ಮ ಕಸನು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ. ಡಿಕೆ ಅವರೇ, ನಿಮ್ಮ ಕೆಟ್ಟ ರಾಜಕೀಯ ಆಟ ನನ್ನ ಬಳಿ ನಡೆಯಲ್ಲ. ಅದು ನಿಮಗೆ ಗೊತ್ತಿರಲಿ, ನಮ್ಮ ಪಕ್ಷವನ್ನು ಏನು ಮಾಡಲು ಸಾಧ್ಯವಿಲ್ಲ...

“ಬೀರು ಬೇಡ ನೀರು ಬೇಕು”- “ಸಾರಾಯಿ ಬೇಡ ಶಿಕ್ಷಣ ಬೇಕು”:ರಾಜ್ಯಾದ್ಯಂತ ವಿರೋಧ, ಮಹಿಳೆಯರ ಪ್ರತಿಭಟನೆ

ಬಾಗಲಕೋಟೆ ಅ.02: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಸರಾಯಿ ಅಂಗಡಿ ತೆರಯಲು ಅಬಕಾರಿ ಇಲಾಖೆ ಸಿದ್ದತೆ ನಡೆಸಿದ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಅಬಕಾರಿ ಸಚಿವ ಆರ್​.ಬಿ ತಿಮ್ಮಾಪುರ ತವರು ಜಿಲ್ಲೆಯಾದ ಬಾಗಲಕೋಟೆಯಲ್ಲಿ ಮದ್ಯಪಾನ ನಿಷೇಧಿಸುವಂತೆ ಮಹಿಳೆಯರು ಬೀದಿಗೆ ಇಳಿದಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕಳೆದ ಎರಡು ದಿನದಿಂದ...

ಮೂವರು ಸಚಿವರನ್ನು ಉಲ್ಲೇಖಿಸಿ, ಬೈಲೂರು ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ..!

ಬೆಳಗಾವಿ: ಬೈಲೂರು ಸ್ವಾಮೀಜಿ ಸೇರಿ ಸಿಎಂ ಸಿದ್ದರಾಮಯ್ಯ ಸಂಪುಟದ ಮೂವರು ಸಚಿವರಿಗೆ ಅನಾಮಿಕನೋರ್ವ ಜೀವ ಬೆದರಿಕೆ ಪತ್ರ ಬರೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಬೈಲೂರು ನಿಷ್ಕಲಮಂಟಪದ ನಿಜಗುಣಾನಂದ ಶ್ರೀಗಳಿಗೆ ಸೇರಿ ಮೂವರು ಸಚಿವರಿಗೆ ಅನಾಮಧೇಯ ವ್ಯಕ್ತಿಯೋರ್ವ ಜೀವ ಬೆದರಿಕೆ ಪತ್ರ ಬರೆದಿದ್ದು, ಸಚಿವ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಹೆಸರನ್ನು ಉಲ್ಲೇಖಿಸಿ...

ಜನತಾ ದರ್ಶನದಲ್ಲಿ ಗಲಾಟೆ: MLA ಹಾಗೂ MP ವಿರುದ್ಧ FIR.

ಕೋಲಾರ: ಇತ್ತೀಚೆಗೆ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕ ನಾರಾಯಣಸ್ವಾಮಿ ಹಾಗೂ ಸಂಸದ ಮುನಿಸ್ವಾಮಿ ಮಧ್ಯೆ ನಡೆದ ಜಟಾಪಟಿ ಸಂಬಂಧ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಕೋಲಾರ  ಸಂಸದ ಮುನಿಸ್ವಾಮಿ ವಿರುದ್ಧ ಬಂಗಾರಪೇಟೆ ಶಾಸಕರ ದೂರಿನ ಅನ್ವಯ ದೂರು ದಾಖಲಾಗಿದೆ. ಮತ್ತೊಂದೆಡೆ ಬಿಜೆಪಿ ಯುವ‌ಮೋರ್ಚಾ ಜಿಲ್ಲಾಧ್ಯಕ್ಷ ಬಾಲಾಜಿ ನೀಡಿದ ದೂರಿನ ಅನ್ವಯ ಶಾಸಕ ನಾರಾಯಣಸ್ವಾಮಿ...

ಯೋಗೀಶಗೌಡ ಕೊಲೆ ಪ್ರಕರಣ: ಸಾಕ್ಷ್ಯ ನಾಶ ಆರೋಪ; ವಿನಯ್‌ ಕುಲಕರ್ಣಿಗೆ ಮತ್ತೊಂದು ಸಂಕಷ್ಟ

ಧಾರವಾಡ (ಸೆ.30): ಧಾರವಾಡ ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಸಾಕ್ಷ್ಯ ನಾಶ ಕೇಸ್‌ನ ಬಿ ರಿಪೋರ್ಟ್ ಮರು ತನಿಖೆಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ನೀಡಿದೆ.  2016ರ ಜೂನ್ 15ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ಈಗಾಗಲೇ ಸಿಬಿಐ ತನಿಖೆಯಲ್ಲಿ ವಿನಯ್‌ ಕುಲಕರ್ಣಿ ಜೈಲಿಗೆ ಹೋಗಿ...

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು ಸೆ.30: ಕೋಮುವಾದಿ, ಜಾತಿವಾದ ವಿರುದ್ಧದ ನಿಲುವುಳ್ಳ ಲೇಖಕರು, ಚಿಂತಕರು, ಸಾಹಿತಿಗಳಿಗೆ ಬೆದರಿಕೆ ಪತ್ರಗಳನ್ನು ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೂವರೆ ವರ್ಷದ ಬಳಿಕ ಸಿಸಿಬಿ  ಪೊಲೀಸರು ಆರೋಪಿಯ ಸುಳಿವು ಪತ್ತೆ ಹಚ್ಚಿದ್ದಾರೆ. ದಾವಣಗೆರೆ ಮೂಲದ ಶಿವಾಜಿರಾವ್ ಎಂಬಾತನನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಶಿವಾಜಿರಾವ್ ಹಿಂದೂ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದು,ಸಿಸಿಬಿ ವಿಚಾರಣೆ ವೇಳೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!