ಕಿತ್ತೂರ ಕರ್ನಾಟಕ ಘೋಷಣೆ ಬಗ್ಗೆ ಸಂಪುಟದಲ್ಲಿ ನಿರ್ಣಯ ಆಗಬೇಕು : ಸಿಎಂ ಬೊಮ್ಮಾಯಿ

ಉಮೇಶ ಗೌರಿ (ಯರಡಾಲ)

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಅದ್ಧೂರಿ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಕೋವಿಡ್ ಕಡಿಮೆ ಆಗಿರೋ ಬಗ್ಗೆ ತಜ್ಞರ ಜತೆಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು‌.

ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನ ವಾಲ್ಮೀಕಿ ಜಯಂತಿಯಲ್ಲಿ ಭಾಗಿ ಆಗುತ್ತೇನೆ. ಸಂಜೆ ಮತ್ತೆ ಹಾನಗಲ್ ಕ್ಷೇತ್ರಕ್ಕೆ ಆಗಮಿಸಿ ಮೂರು ದಿ‌ನ ಪ್ರಚಾರ ಮಾಡುತ್ತೇನೆ. ಎರಡು ಕ್ಷೇತ್ರದಲ್ಲಿ ವಾತಾವರಣ ಚನ್ನಾಗಿ ಇದೆ. ಎರಡು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.

ಇದೆ ತಿಂಗಳು 23ಕ್ಕೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯಲ್ಲಿ ಭಾಗಿಯಾಗಲು ಬೆಳಗಾವಿಗೆ ಬರುತ್ತೇನೆ ಎಂದ ಮುಖ್ಯಮಂತ್ರಿಗಳು ಕಿತ್ತೂರ ಕರ್ನಾಟಕ ಘೋಷಣೆ ಬಗ್ಗೆ ಸಂಪುಟದಲ್ಲಿ ನಿರ್ಣಯ ಆಗಬೇಕು, ಈ ಬಗ್ಗೆ ನೋಡೋಣ ಎಂದರು.

Share This Article
";