ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಬಲಿ

ಉಮೇಶ ಗೌರಿ (ಯರಡಾಲ)

ಹಾಸನ: ಅನಾರೋಗ್ಯ ಪೀಡಿತ ಮಹಿಳೆಯನ್ನು ಗುಣಪಡಿಸುವ ನೆಪದಲ್ಲಿ ಪೂಜೆ ವೇಳೆ ಪೂಜಾರಿ ಬೆತ್ತದ ಏಟು ನೀಡಿದ ಪರಿಣಾಮವಾಗಿ, ಮಹಿಳೆ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಕಾಯಿಲೆ ಗುಣಪಡಿಸುತ್ತೇನೆಂದು ಪೂಜಾರಿ ಕೊಟ್ಟ ಬೆತ್ತದ ಏಟಿಗೆ ಮಹಿಳೆ ಸಾವು!
ಪಾರ್ವತಿ (47) ಮೃತಪಟ್ಟ ಮಹಿಳೆ. ಕಳೆದ ಕೆಲದಿನಗಳಿಂದ ತಲೆ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ. ಹೀಗಾಗಿ ದೇವರ ಮೊರೆ ಹೋಗಿದ್ದರು.

ನೀವು ಗುಣಮುಖರಾಗಲು ಪೂಜೆ ಮಾಡಿಸಬೇಕು ಎಂದು ಮಹಿಳೆಗೆ ಪೂಜಾರಿ ತಿಳಿಸಿದ್ದಾರೆ. ಪೂಜೆ ಮಾಡಿ ತಲೆನೋವು ಗುಣಪಡಿಸುವುದಾಗಿ ಹೇಳಿ ಮಹಿಳೆ ತಲೆಗೆ ಪೂಜಾರಿ ಬೆತ್ತದಿಂದ ಹೊಡೆದಿದ್ದಾರೆ.

Share This Article
";