ಮುಂಬಯಿ: ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್ಪಿನ್ ಸುಕೇಶ್ ಚಂದ್ರಶೇಖರ್ ಜತೆ ಜಾಕ್ವೆಲಿನ್ ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಇದಕ್ಕೆ ಸಾಕ್ಷ್ಯ ಎಂಬಂತೆ ಸುಕೇಶ್ ಹಾಗೂ ಈ ನಟಿಯ ಕಿಸ್ಸಿಂಗ್ ಫೋಟೋಗಳು ಲೀಕ್ ಆಗಿವೆ. ಇದರಿಂದ ಈ ಪ್ರಕರಣ ಮತ್ತಷ್ಟು ಬಿಗಿಯಾಗಿದೆ.
ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ (ಇಡಿ) ನಿರ್ಧರಿಸಿದೆ. ಈ ಕಾರಣಕ್ಕೆ ಅವರು ಈಗ ವಿದೇಶಕ್ಕೆ ತೆರಳುವಂತಿಲ್ಲ. ಡಿಸೆಂಬರ್ 10ಕ್ಕೆ ರಿಯಾದ್ನಲ್ಲಿ Da-bangg ಕಾರ್ಯಕ್ರಮ ಇದೆ. ಇದಕ್ಕೆ ಸಲ್ಮಾನ್ ಖಾನ್ ಹಾಗೂ ಜಾಕ್ವೆಲಿನ್ ಒಟ್ಟಾಗಿ ತೆರಳಬೇಕಿತ್ತು. ಆದರೆ, ಜಾಕ್ವೆಲಿನ್ ಮಾಡಿಕೊಂಡ ಎಡವಟ್ಟಿನಿಂದ ಅವರಿಗೆ ವಿದೇಶಕ್ಕೆ ತೆರಳೋಕೆ ಆಗುತ್ತಿಲ್ಲ. ಹೀಗಾಗಿ, ಅವರನ್ನು ದೂರ ಇಡಲು ಸಲ್ಲು ನಿರ್ಧರಿಸಿದ್ದಾರೆ. ಈ ಮಧ್ಯೆ ಜಾಕ್ವೆಲಿನ್ ಇಂದು (ಡಿಸೆಂಬರ್ 5) ದುಬೈಗೆ ಹಾರುವ ಪ್ರಯತ್ನ ಮಾಡಿದ್ದರು. ಈ ವೇಳೆ ಮುಂಬೈನ ವಿಮಾನ ನಿಲ್ದಾಣದಲ್ಲಿ ಅವರನ್ನು ಅಧಿಕಾರಿಗಳು ತಡೆದಿದ್ದಾರೆ.
Da-bangg ಕಾರ್ಯಕ್ರಮಕ್ಕೆ ಎಂಟ್ರಿ ಪಡೆಯೋಕೆ ಅಭಿಮಾನಿಗಳು ಟಿಕೆಟ್ ಪಡೆಯಬೇಕು. ಈ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಹಾಗೂ ಮತ್ತಿತರರು ಡ್ಯಾನ್ಸ್ ಮಾಡಿ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಡಿಸೆಂಬರ್ 10ರಂದು ರಿಯಾದ್ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ರೊಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ. ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಮನ್ಸ್ ನೀಡಲಾಗಿತ್ತು.