ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಕೊಡಗು ಮೂಲದ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ

ಉಮೇಶ ಗೌರಿ (ಯರಡಾಲ)

ಮಡಿಕೇರಿ: ಜಮ್ಮು- ಕಾಶ್ಮೀರದಲ್ಲಿ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಹುತಾತ್ಮರಾದ ದುರ್ಘಟನೆ ನಡೆದಿದೆ. ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಹಿಮಪಾತಕ್ಕೆ ಸಿಲುಕಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಪತ್ರಕರ್ತರಿಗೆ ತಿಳಿಸಿದ್ದಾರೆ.

ಸದ್ಯ ಯೋಧನ ಕುಟುಂಬ ಕೇರಳದ‌ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದ್ದು ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ ಕೇರಳಕ್ಕೆ ಶಿಫ್ಟ್ ಆಗಿತ್ತು ಎಂದು ತಿಳಿದುಬಂದಿದೆ.

 ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.

 

Share This Article
";