ಚನ್ನಮ್ಮನ ಕಿತ್ತೂರು ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್
ಚನ್ನಮ್ಮನ ಕಿತ್ತೂರು: ಸಮೀಪದ ತಿಮ್ಮಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ
ಇರುವ ಸರ್ವಿಸ್ ರಸ್ತೆಯ ಚರಂಡಿಯಲ್ಲಿ ಗುರುವಾರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಆತನನ್ನು ಕೊಲೆ ಮಾಡಿ ಎಸೆಲಾಗಿದೆ ಎಂದು ಪೊಲೀಸರು ಖಚಿತ ಪಡಿಸಿದ್ದಾರೆ.
ಕೊಲೆಯಾದ ವ್ಯಕ್ತಿ 36 ವರ್ಷ ಆಸುಪಾಸಿನವನಾಗಿದ್ದು ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಮಹಾಲಿಂಗಪ್ಪ ನಂದಗಾವಿ, ಡಿವೈಎಸ್ಪಿ
ಶಿವಾನಂದ ಕಟಗಿ ಅವರ ಮಾರ್ಗದರ್ಶನದಲ್ಲಿ ಸ್ಥಳದ ಪಂಚನಾಮೆ ನಡೆಸಿದರು.
ಈ ವೇಳೆ ಸಿಪಿಐ ಮಂಜುನಾಥ ಕುಸುಗಲ್ಲ, ಪಿಎಸ್ಐ ದೇವರಾಜ ಉಳ್ಳೆಗಡ್ಡಿ ಹಾಗೂ ಸಿಬ್ಬಂದಿ ಇದ್ದರು.
ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ
ಕೈಗೊಂಡಿದ್ದಾರೆ.

Share This Article
";