ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 1.82 ಲಕ್ಷ

ಉಮೇಶ ಗೌರಿ (ಯರಡಾಲ)

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಅಸಿಸ್ಟೆಂಟ್ ಪ್ರೊಫೆಸರ್ ಫಾರ್ಮ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್ uasbangalore.edu.in ಗೆ ಭೇಟಿ ನೀಡಿ.ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ.
ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರು
ಹುದ್ದೆಯ ಹೆಸರು
ಅಸಿಸ್ಟೆಂಟ್ ಪ್ರೊಫೆಸರ್, ಫಾರ್ಮ್ ಮ್ಯಾನೇಜರ್
ಒಟ್ಟು ಹುದ್ದೆಗಳು
19
ವಿದ್ಯಾರ್ಹತೆ:ಪದವಿ, ಸ್ನಾತಕೋತ್ತರ ಪದವಿ, ಪಿಎಚ್​ಡಿ
ಉದ್ಯೋಗದ ಸ್ಥಳ:ಬೆಂಗಳೂರು
ವೇತನ:ಮಾಸಿಕ ₹ 35,000-1,82,400
ಅರ್ಜಿ ಸಲ್ಲಿಕೆ ಬಗ್ಗೆ ಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ
08/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
09/02/2022

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಪ್ರೊಫೆಸರ್- 15
ಫಾರ್ಮ್ ಮ್ಯಾನೇಜರ್ -4
ವಿದ್ಯಾರ್ಹತೆ:
ಅಸಿಸ್ಟೆಂಟ್ ಪ್ರೊಫೆಸರ್- ಸ್ನಾತಕೋತ್ತರ ಪದವಿ, ಪಿಎಚ್​ಡಿ
ಫಾರ್ಮ್ ಮ್ಯಾನೇಜರ್ – ಅಗ್ರಿಕಲ್ಚರ್/ಹಾರ್ಟಿಕಲ್ಚರ್/ಫಾರೆಸ್ಟ್ರಿ/ಸಿರಿಕಲ್ಚರ್/ಅಗ್ರಿಕಲ್ಚರಲ್ ಮಾರ್ಕೆಟಿಂಗ್ & ಕಾರ್ಪೊರೇಷನ್​​ನಲ್ಲಿ ಪದವಿ
ವಯೋಮಿತಿ:
ಅಸಿಸ್ಟೆಂಟ್ ಪ್ರೊಫೆಸರ್- 42 ವರ್ಷ
ಫಾರ್ಮ್ ಮ್ಯಾನೇಜರ್ -40 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 1 ವರ್ಷ
SC/ST ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:

ಅಸಿಸ್ಟೆಂಟ್ ಪ್ರೊಫೆಸರ್
SC/ST ಅಭ್ಯರ್ಥಿಗಳು: ರೂ.1000/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.2000/-
ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಫಾರ್ಮ್ ಮ್ಯಾನೇಜರ್
SC/ST ಅಭ್ಯರ್ಥಿಗಳು: ರೂ.500/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ವೇತನ:
ಅಸಿಸ್ಟೆಂಟ್ ಪ್ರೊಫೆಸರ್- ಮಾಸಿಕ ₹ 57,700-1,82,400
ಫಾರ್ಮ್ ಮ್ಯಾನೇಜರ್ – ಮಾಸಿಕ ₹ 35,400-1,12,400
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 08/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/02/2022
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತಾಧಿಕಾರಿ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, GKVK
ಬೆಂಗಳೂರು-560065
ಕರ್ನಾಟಕ

2022:ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";