ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್ : ಮಾ.31ಕ್ಕೆ ಸೇವೆ ಅಂತ್ಯಗೊಳಿಸಿ ‘ಶಿಕ್ಷಣ ಇಲಾಖೆ’

ಉಮೇಶ ಗೌರಿ (ಯರಡಾಲ)

ಬೆಂಗಳೂರು: 2021-22ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿರುವ ಅತಿಥಿ ಶಿಕ್ಷಕರ ಸೇವೆಯನ್ನು ದಿನಾಂಕ 31-03-2022ಕ್ಕೆ ಅಂತ್ಯಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.

 ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ನೀಡಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದು, ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯನ್ನು ದಿನಾಂಕ 10-04-2022ಕ್ಕೆ ಅಂತ್ಯಗೊಳಿಸಲು ಈಗಾಗಲೇ ನಿರ್ಧಾರವಾಗಿರುತ್ತದೆ ಎಂದು ತಿಳಿಸಿದ್ದಾರೆ.

2021-22ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಂಡಿರುವ ಅತಿಥಿ ಶಿಕ್ಷಕರ ಸೇವೆಯನ್ನು ದಿನಾಂಕ 31-03-2022ಕ್ಕೆ ಅಂತ್ಯಗೊಳಿಸಲು ಸೂಚಿಸಿದ್ದಾರೆ.

Share This Article
";