ರಾಜ್ಯದ ಸಾರಿಗೆಯ ಚಿತ್ರಣವನ್ನು ಬದಲಾಯಿಸುವ ಮಹತ್ವಾಕಾಂಕ್ಷೆ ಯೋಜನೆಗಳಿಗೆ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಮೇಶ ಗೌರಿ (ಯರಡಾಲ)

ಹುಬ್ಬಳ್ಳಿ,ಫೆ. 28 :ಇಂದು ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ ಎಂದು ಮುಖ್ಯಾಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ ಎಂದು ತಿಳಿಸಿದರು.

ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಯವರು ಹಲವಾರು ಯೋಜನೆಗಳಿಗೆ ಚಾಲನೆ ಹಾಗೂ ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ರಾಜ್ಯದ ಬಗೆಗಿನ ಕಳಕಳಿಯಿಂದ ಹಲವಾರು ಅಭಿವೃದ್ಧಿ ಯೋಜನೆಗಳು ಕರ್ನಾಟಕದಲ್ಲಿ ಅನುಷ್ಠಾನವಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಹಾಗೂ ರಾಜ್ಯ ಹೆದ್ದಾರಿಗಳ ಉನ್ನತೀಕರಣದ ಯೋಜನೆಗಳು ಜಾರಿಯಾಗುತ್ತಿವೆ ಎಂದು ಹೇಳಿದರು.

Share This Article
";