ಬೆಳಗಾವಿಯಲ್ಲಿ ಇಂದಿನಿಂದ 3 ದಿನ ಮೋಡ ಬಿತ್ತನೆ :ಸಚಿವ ಸತೀಶ ಜಾರಕಿಹೊಳಿ

ಉಮೇಶ ಗೌರಿ (ಯರಡಾಲ)

ಬೆಳಗಾವಿ(ಸೆ.29):  ಮಳೆ ಕೈಕೊಟ್ಟಿರುವುದರಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬೆಳಗಾವಿ ಜಿಲ್ಲೆಯಲ್ಲಿ ಸೆ.29 ರಿಂದ 3 ದಿನಗಳ ಕಾಲ ಬೆಳಗಾಂ ಶುಗರ್ಸ್‌ ವತಿಯಿಂದ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಮೋಡ ಬಿತ್ತನೆ ಖರ್ಚು, ವೆಚ್ಚವನ್ನು ಬೆಳಗಾಂ ಶುಗರ್ಸ್‌ ಭರಿಸಲಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ನಗರದ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಅನುಮತಿ ನೀಡಿವೆ. ಮೋಡ ಬಿತ್ತನೆಗೆ ಬಳಸುವ ವಿಮಾನಗಳು ಸಾಂಬ್ರಾ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ. ಇನ್ನು, ಮೋಡಗಳ ಲಭ್ಯತೆಯ ಅನುಗುಣವಾಗಿ ಅಲ್ಲಲ್ಲಿ ಮೋಡ ಬಿತ್ತನೆ ಮಾಡಲಾಗುವುದು. ಈ 3 ದಿನಗಳ ಕಾಲ ಜಿಲ್ಲೆಯಲ್ಲಿ ಹೆಚ್ಚಿನ ಮೋಡಗಳು ಸಿಗಲಿವೆ ಎನ್ನುವ ಮಾಹಿತಿಯಿದೆ. ಮೋಡ ಬಿತ್ತನೆ ಕಾರ್ಯ ಬೆಳಗಾವಿ ಜಿಲ್ಲೆಗೆ ಅಷ್ಟೇ ಸೀಮಿತವಾಗಿದೆ ಎಂದು ತಿಳಿಸಿದರು.

Share This Article
";