ಕಿತ್ತೂರು ರಾಣಿ ಚನ್ನಮ್ಮನವರ ವೀರಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್

ನ್ನಮ್ಮನ ಕಿತ್ತೂರು: ವಿಧಾನಸೌಧ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023 ರ ಅಂಗವಾಗಿ ಆಯೋಜಿಸಲಾದ ವಿಜಯದ ಧ್ಯೋತಕವಾಗಿ ರಾಜ್ಯದಾದ್ಯಂತ ಸಂಚರಿಸುವ “ವೀರಜ್ಯೋತಿ”  ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬೆಂಗಳೂರರು ವಿಧಾನಸೌಧ ಮುಂಬಾಗದಲ್ಲಿ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸ್ವಾತಂತ್ರ್ಯದ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ವೀರ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಇಂದಿನ ಯುವ ಜನತೆಗೆ ರಾಣಿ ಚನ್ನಮ್ಮ ಸ್ಪೂರ್ತಿಯಾಗಬೇಕು. ಭಾರತ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ಕರುನಾಡಿನ ನೆಲ ಮತ್ತು ಜಲವನ್ನು ಪ್ರೀತಿಸಬೇಕು. ನಾಡಿನ ಜನರಿಗೆ ಕಿತ್ತೂರು ರಾಣಿ ಚನ್ನಮ್ಮನ ಆದರ್ಶ ಜೀವನದ ಕುರಿತು ಅರಿವು ಮೂಡಿಸುವ ಸಲುವಾಗಿ ನಾನು ಮುಖ್ಯ  ಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಜಯಂತಿಯನ್ನು ಆಚರಿಸಲು ಆದೇಶಿಸಿದ್ದೆ. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಅಕ್ಟೋಬರ್‌ 23, 24 ಹಾಗೂ 25 ರಂದು ರಾಣಿ ಚನ್ನಮ್ಮನ ಜಯಂತಿಯನ್ನು ಸರ್ಕಾರದ ವತಿಯಿಂದ ಅದ್ದೂರಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

“ವೀರಜ್ಯೋತಿ” ಚಾಲನಾ ಕಾರ್ಯಕ್ರಮ ಉದ್ಘಾಟನೆ ಮಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು

ಈ ಸಂದರ್ಭದಲ್ಲಿ  ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ. ಧರಣಿದೇವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

 

 

Share This Article
";