ಕರ್ತವ್ಯಲೋಪ ಶಿಕ್ಷಕ ಎಸ್.ಜಿ.ಗಡಾದ ಅಮಾನತ್ತು: ಡಿಡಿಪಿಐ ಆದೇಶ

ಉಮೇಶ ಗೌರಿ (ಯರಡಾಲ)

ಕಿತ್ತೂರು (ಅ.12) ತಾಲೂಕಿನ ಹುಲಿಕಟ್ಟಿಯ ಪಿ.ಕೆ.ಮೊಕಾಶಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಎಸ್ ಜಿ ಗಡಾದ
ಪದೇ ಪದೇ ಶಾಲೆಗೆ ಗೈರು ಹಾಜರಾಗುತ್ತಿರುವುದು ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ನಿರಾಸಕ್ತಿ ತೋರಿದ ಹಿನ್ನೆಲೆಯಲ್ಲಿ  ಸೇವೆಯಿಂದ ಅಮಾನತ್ತುಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಶಾಲಾ ಪಠ್ಯಕ್ರಮದಲ್ಲಿ ಪದೇ ಪದೇ ನಿರಾಸಕ್ತಿ ತೋರಿಸಿದ್ದು ಅನುಮತಿ ಪಡೆಯದೇ ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಹಾಗೂ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಟೀಸ್ ನೀಡಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಉಪಸಮನ್ವಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಕಾರ್ಯವೈಖರಿ ಕುರಿತು ವರದಿ ಸಲ್ಲಿಸಿದ ಹಿನ್ನೆಲೆಯಲ್ಲಿ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ರವರು ಸದರಿ ಶಿಕ್ಷಕರನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2020ರ ನಿಯಮ 3 ಮತ್ತು 31 ನ್ನು ಉಲ್ಲಂಘಿಸಿದ ಕಾರಣ ನವೆಂಬರ್ 11 ರಂದು ಸೇವೆಯಿಂದ  ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದ್ದಾರೆ.

 

Share This Article
";