ಸುದ್ದಿ ಸದ್ದು ನ್ಯೂಸ್
ಚನ್ನಮ್ಮನ ಕಿತ್ತೂರು: ಬಹುತೇಕ ಕಡೆ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಅಪೂರ್ಣವಾಗಿವೆ ಹಾಗೂ ಕಳಪೆಯಾಗಿವೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಬರ ನಿರ್ವಹಣೆ ಕುರಿತು ತಾಲೂಕಾ ಆಡಳಿತ ಭವನದಲ್ಲಿ ಬುಧವಾರ ನಡೆದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ಷೇತ್ರದಾದ್ಯಂತ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಅಪೂರ್ಣವಾಗಿವೆ ಹಾಗೂ ಕಳಪೆಯಾಗಿವೆ ಎಂದು ಸಾರ್ವಜನಿಕರಿಂದ ಆರೋಪಗಳು ಬರುತ್ತಿವೆ ಹಾಗಾಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕೈಸುಪರ್ದಿಗೆ ಪಡೆದುಕೊಳ್ಳುವಾಗ ವರ್ಕ್ ಆರ್ಡರ್‌ನಲ್ಲಿ ಇದ್ದಂತೆ ಕಾಮಗಾರಿ ಆಗಿದಿಯೇ ಎಂಬುದರ ಕುರಿತು ಕಾತರಿ ಮಾಡಿಕೊಂಡು ಸುಮಾರು ಹತ್ತಾರು ದಿನ ಟ್ರೈಯಿಲ್ ನೋಡಿದ ನಂತರ ಹ್ಯಾಂಡ್ಓವರ್ ಪಡೆದುಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸಿ ಸೂಕ್ತ ಯೋಜನೆ ರೂಪಿಸಬೇಕು. ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾಗಿರುವುದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ನರೇಗಾ ಯೋಜನೆಯಡಿ ಸಮರ್ಪಕ ಬರ ನಿರ್ವಹಣೆಗೆ ಅನುಕೂಲವಾಗುವಂತಹ ಮತ್ತು ಶಾಶ್ವತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.
ತಹಶೀಲ್ದಾರ ರವೀಂದ್ರ ಹಾದಿಮನಿ ಮಾತನಾಡಿ ಮಂಬರುವ ಬರಗಾಲದಲ್ಲಿ ತಾಲೂಕಿನ ಜನತೆಗೆ ಯಾವೂದೇ ತರಹದ ಸಮಸ್ಯೆಗಳು ಬರದಂತೆ ಆಯಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧೀಕಾರಿಗಳು ನೋಡಿಕೊಳ್ಳಬೇಕು. ಅಕಸ್ಮಾತ ಏನಾದರೂ ಸಮಸ್ಯೆಗಳು ಎದುರಾದರೆ ಕೂಡಲೆ ಮೇಲಾಧಿಕಾರಿಗಳ ಗಮನಕ್ಕೆ ತೆಗೆದುಕೊಂಡು ಬರಬೇಕು ಎಂದು ಮನವಿ ಮಾಡಿದರು.
ಈ ವೇಳೆ ಕೆಲವು ಅಭಿವೃದ್ಧಿ ಅಧಿಕಾರಿಗಳು ಕೊಳವೆ ಭಾವಿಗಳಿಗೆ ಆಗುವ ಸಮಸ್ಯೆಗಳ ಕುರಿತು ಅಳಲನ್ನು ತೋಡಿಕೊಂಡರು
ಶುಭಂ ಶುಕ್ಲಾ ಮಾತನಾಡಿ ಕುಡಿಯುವ ನೀರು ಸಮಸ್ಯೆ ಆಗದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ವಿಶೇಷ ಕಾಳಜಿ ವಹಿಸಿ ಬರ ನಿರ್ವಹಣೆಗೆ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಶುದ್ಧ ಕುಡಿಯುವ ನೀರು ಪೂರೈಸಲು ಟ್ಯಾಂಕರ್ ಹಾಗೂ ಕೊಳವೆಬಾವಿ ದುರಸ್ತಿ ಮತ್ತಿತರ ಕೆಲಸಗಳಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಂದು ತಿಳಿಸಿದ ಅವರು ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ವೇಳೆ ತಾಲೂಕಿನ ಗ್ರಾಮಗಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಸೇರಿದಂತೆ ಇನ್ನೂ ಅನೇಕ ಅಧಿಕಾರಿಗಳು ಇದ್ದರು.