ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಅವರ ಜಯಂತಿ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಂಗ್ಲ ಭಾಷಾ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಗಜಾನಂದ ಸೂರ್ಯವಂಶಿ ಮಾತನಾಡಿ ವಿದ್ಯಾರ್ಥಿಗಳು ಮಹನೀಯರ ಜೀವನ ಹಾಗೂ ಸಂದೇಶಗಳನ್ನು ಅರಿತುಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಸರಳತೆ ಮತ್ತು ಸಜ್ಜನಿಕೆಯಿಂದ ಜೀವನದಲ್ಲಿ ಶಿಸ್ತು ಮತ್ತು ಸಂಸ್ಕಾರ ಬಹಳ ಮುಖ್ಯ ಎಂದು ಅವರು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್. ಆರ್. ಠಕ್ಕಾಯಿ ಗಾಂಧೀಜಿಯವರ ಸತ್ಯ, ಅಹಿಂಸೆ, ಶಾಂತಿ ಹಾಗೂ ಶಾಸ್ತ್ರೀಜಿ ಅವರ ದಕ್ಷತೆ, ಪ್ರಾಮಾಣಿಕತೆ ಎಲ್ಲರಿಗೂ ಮಾದರಿ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ, ಕನ್ನಡ ಜಾನಪದ ಪರಿಷತ್ತಿನ ಬೈಲಹೊಂಗಲ ತಾಲೂಕಾಧ್ಯಕ್ಷ ಚಂದ್ರಶೇಖರ ರುದ್ರಪ್ಪ ಕೊಪ್ಪದ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವಿನಾಯಕ ಬಡಿಗೇರ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ಶ್ರೀಪಾಲ ಚೌಗಲಾ, ವಿರೇಂದ್ರ ಪಾಟೀಲ, ರೇಖಾ ಸೊರಟೂರ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಕ್ಷತಾ ಚಚಡಿ, ಪವಿತ್ರಾ ಆಡಿನ, ಚಿನ್ಮಯೀ ಹಳ್ಳಿಕೇರಿಮಠ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಜೀವನ ಸಾಧನೆ ಕುರಿತು ಮಾತನಾಡಿದರು. ತನುಜಾ ಬಡಿಗೇರ ಪ್ರಾರ್ಥಿಸಿದರು. ಪೂಜಾ ಸೊಗಲದ ಸ್ವಾಗತಿಸಿದರು. ನಿರ್ಮಲಾ ಸೊಗಲದ ನಿರೂಪಿಸಿದರು. ಅಮೂಲ್ಯ ಸೂರ್ಯವಂಶಿ ವಂದಿಸಿದರು.