ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ !ಸೆ. 6ಕ್ಕೆ 7ನೇ`ವೇತನ ಆಯೋಗ’ ಘೋಷಣೆ ಸಾಧ್ಯತೆ

ಉಮೇಶ ಗೌರಿ (ಯರಡಾಲ)

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ 7ನೇ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ.

ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ನಿವೃತ್ತಿ ಅಧಿಕಾರಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿಯನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ. ಆಯೋಗದ ವರದಿ ಬಂದ ನಂತರ ಮುಂದಿನ ಬಜೆಟ್ ನಲ್ಲಿ ವೇತನ ಆಯೋಗದ ಶಿಫಾರಸು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article
";