ನಟಿ ಸುಧಾರಾಣಿ ಗೋವರ್ಧನಗೆ ಗೌರವ ಡಾಕ್ಟರೇಟ್

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿಯವರಿಗೆ ಕಲಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದಗೌರವ ಡಾಕ್ಟರೇಟ್ ನೀಡಲಾಗಿದೆ.

ಗೌರವ ಡಾಕ್ಟರೇಟ್ ಪದವಿ ಪಡೆಯುತ್ತಿರುವ ನಟಿ ಸುಧಾರಾಣಿ

ಸ್ಯಾಂಡಲ್‍ವುಡ್‍ನ ಎವರ್ ಗ್ರೀನ್ ನಟಿ ನಾಯಕಿ ಸುಧಾರಾಣಿ ಬಾಲ್ಯ ನಟಿಯಾಗಿ ತಮ್ಮ ನಟನೆಯನ್ನು ಪ್ರಾರಂಭಿಸಿದ್ದರು. 

ಕೇವಲ 12ನೇ ವಯಸ್ಸಿನಲ್ಲಿ ಶಿವರಾಜ್‍ಕುಮಾರ್ ಅವರ ಮೊದಲ ಸಿನಿಮಾ ಆನಂದ್‍ಗೆ ನಾಯಕಿನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಇವರು ನಟಿಸಿದ ಸಿನಿಮಾಗಳೆಲ್ಲವು ಸೂಪರ್ ಹಿಟ್ ಆಗುತ್ತಿದ್ದವು. ಇವರು ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 35 ವರ್ಷ ಕಳೆದರೂ ಸಹ ಇಂದಿಗೂ ಅಷ್ಟೇ ಬೇಡಿಕೆ ಉಳಿಸಿಕೊಂಡು ಬಂದಿದ್ದಾರೆ.

ಹಲವಾರು ಭಾಷೆಯ ಸಿನಿಪ್ರಿಯರ ನೆಚ್ಚಿನ ನಟಿ ಸುಧಾರಾಣಿ, ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಸಖತ್ ಆಕ್ಟಿವ್ ಆಗಿದ್ದಾರೆ.  

ಇದೀಗ ಅವರಿಗೆ ಗೌರವ ಡಾಕ್ಟರೇಟ್ ಬಂದಿರುವ ಕುರಿತಾಗಿ ಸಂತಸವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಿನಿಪ್ರಿಯರು ಮತ್ತು ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸಿ ಕಾಮೆಂಟ್ ಮಾಡುತ್ತಿದ್ದಾರೆ.

 

Share This Article
";