ಶಿಕ್ಷಕರ ನೇಮಕಾತಿಯಲ್ಲಿ ಹುದ್ದೆಗೆ ತಲಾ 15 ಲಕ್ಷ ರೊ.ಗೆ ಮಾರಾಟ.!ಸಿಐಡಿ ತನಿಖೆಯಿಂದ ಮಾಹಿತಿ ಬಹಿರಂಗ

ಉಮೇಶ ಗೌರಿ (ಯರಡಾಲ)

ಬೆಂಗಳೂರು : 2013-14 ರಲ್ಲಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದ್ದು, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು 2012-13 ಮತ್ತು 2014-15ರಲ್ಲಿ ತಲಾ 15 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂದು ಸಿಐಡಿ ತನಿಖೆಯಿಂದ ತಿಳಿದುಬಂದಿದೆ.

ಉನ್ನತ ಮೂಲಗಳ ಪ್ರಕಾರ, ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಕೆಲ ಅಭ್ಯರ್ಥಿಗಳು 15 ಲಕ್ಷ ರೂ. ಲಂಚ ನೀಡಿದ್ದಾರೆ. ಸಿಐಡಿ ವಶದಲ್ಲಿರುವ ಮಹಿಳಾ ಅಭ್ಯರ್ಥಿಯೊಬ್ಬರು, ಕೆಲಸ ಮಾಡಲು 15 ಲಕ್ಷ ರೂ.ಗಳನ್ನು ಪಾವತಿಸಿದ್ದಾರೆ ಎಂದು ತನಿಖೆಯ ವೇಳೆ ಬಹಿರಂಗಪಡಿಸಿದ್ದಾರೆ’ ಎಂದು ತಿಳಿದುಬಂದಿದೆ

ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು, 10 ವರ್ಷಗಳಿಗೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಒಬ್ಬರನ್ನು ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಈವರೆಗೆ ಸಿಐಡಿ 11 ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡಿದೆ , ಕೆಲವರನ್ನು ಕಾನೂನುಬಾಹಿರವಾಗಿ ನೇಮಕ ಮಾಡಲಾಗಿದೆ. ಕೆಲವು ಅಧಿಕಾರಿಗಳು ಸಹ ಸಿಐಡಿ ವಶದಲ್ಲಿದ್ದಾರೆ.

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";