ಬೆಂಗಳೂರು ಫೆ.10: ಹಿಜಾಬ್ ಧರಿಸಿ ಶಾಲಾ ಕಾಲೇಜುಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಮದ್ಯಂತರ ಆದೇಶ ನೀಡಿದೆ. ಮಧ್ಯಂತರ ಆದೇಶವು ಅಧಿಕೃತವಾಗಿ ಇನ್ನಷ್ಟೇ ಪ್ರಕಟವಾಗಬೇಕಿದೆ.
ಇಂದು ಹಿಜಾಬ್ ಕುರಿತ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ತ್ರಿಸದಸ್ಯ ಪೀಠ ಈ ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಸೋಮವಾರ 02.30 ಕ್ಕೆ ಮುಂದೂಡಿದೆ.
ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ರವರನ್ನು ಒಳಗೊಂಡ ತ್ರಿಸದ್ಯ ಪೀಠದಲ್ಲಿ ನಡೆಯಿತು.
ಮುಂದಿನ ಆದೇಶ ಬರುವವರೆಗೂ ಕಾಲೇಜಿಗೆ ಯಾರೂ ಸಹ ಹಿಜಾಬ್ ಮತ್ತು ಕೇಸರಿ ಶಾಲನ್ನು ಧರ್ಮ ಸೂಚಕ ವಸ್ತ್ರಗಳನ್ನು ಧರಿಸಿ ಹೋಗುವಂತಿಲ್ಲ.
ಶಾಲಾ ಕಾಲೇಜುಗಳು ನಡೆಯಲೇಬೇಕು. ಹೀಗಾಗಿ ಮಧ್ಯಂತರ ಆದೇಶ ನೀಡಿದ್ದೇವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.ಸಾಂವಿಧಾನತ್ಮಕ ಪ್ರಶ್ನೆಗಳು ಎದ್ದಿರುವ ಕಾರಣ ವಿಚಾರಣೆಯನ್ನು ಗಂಭೀರವಾಗಿ ನಡೆಸಲಾಗುವುದು ಎಂದು ಹೇಳಿರುವ ಪೀಠ ವಿಚಾರಣೆಯನ್ನು ಸೋಮವಾರ ಮದ್ಯಾಹ್ನ : 02.30 ಕ್ಕೆ ಮುಂದೂಡಿದೆ.