ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಸುಳಿವು, ಯತ್ನಾಳ್, ಜಾರಕಿಹೊಳಿ, ಹೇಳಿದ್ದು ನಿಜವಾಯ್ತಾ?

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್ 

ದಾವಣಗೆರೆ, (ಡಿಸೆಂಬರ್.04): ಒಂದೆಡೆ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ರಂಗು ಜೋರಾಗಿದ್ದು ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಸದ್ದುಗದ್ದಲವಿಲ್ಲದೆ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಸುಳಿವು ಕೊಟ್ಟಿದ್ದು, ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ,  ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಸರ್ಕಾರ ರಚಿಸಲು ಮಹತ್ವದ ಪಾತ್ರ ವಹಿಸಿದ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಪಕ್ಷದಲ್ಲೇ ಇದ್ದು ಪಕ್ಷದ ಕೆಲ ನಾಯಕರ ವಿರುದ್ಧ ಹರಿಹಾಯ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನುಡಿದ ಭವಿಷ್ಯ ನಿಜವಾಗುವ ಎಲ್ಲಾ ಲಕ್ಷಣಗಳು ಗೋಚರಿಸುವುದರ ಜೊತೆಗೆ ಮುಖ್ಯ ಮಂತ್ರಿ ಕುರ್ಚಿಗೂ ಕಂಟಕ ಎದುರಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

 

 

 

Share This Article
";