ರಮೇಶ್ ಜಾರಕಿಹೊಳಿ ಬಿಜೆಪಿಗೆ ಬಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಕೆ.ಎಸ್.ಈಶ್ವರಪ್ಪ

ಉಮೇಶ ಗೌರಿ (ಯರಡಾಲ)

ಬೆಳಗಾವಿ (ನ.28): ಕಾಂಗ್ರೆಸ್‌ನಲ್ಲಿ ತಮಗೆ ಬೇಕಾದವರಿಗೆ, ಹಣವಂತರಿಗೆ, ಹಾಗೂ ತಮ್ಮ ಆಪ್ತರಿಗೆ ಪರಿಷತ್ ಟಿಕೆಟ್ ನೀಡಿದ್ದಾರೆ. ಇದನ್ನು ಜನ ತಿರಸ್ಕರಿಸುತ್ತಾರೆ. ಇನ್ನು ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಟಾಂಗ್ ಕೊಟ್ರು.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಬಿಜೆಪಿ ಡಿಸೆಂಬರ್ 12 ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ತಲಾ 10 ಹಿಂದುಳಿದ ವರ್ಗಗಳ ನಾಯಕರ ಜಾಗೃತಿ ಸಮಾವೇಶ ನಡೆಯಲಿದೆ. ಅದರ ಪ್ರಯುಕ್ತ ಬೆಳಗಾವಿ ಹಾಗೂ ಚಿಕ್ಕೋಡಿಯಲ್ಲಿ ವಿಭಾಮಟ್ಟದ ಸಭೆ ನಡೆಸುತ್ತಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸುಮಾರು 3500 ಜನ ದಲಿತ ನಾಯಕರ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನು ಶಾಸಕ ರಮೇಶ ಜಾರಕಿಹೊಳಿ ಕಾಂಗ್ರೆಸ್‌ಗೆ ಮಾಡಿದ ಅನ್ಯಾಯ ಕುರಿತಂತೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಬಗ್ಗೆ ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಅನ್ಯಾಯ ಮಾಡಿದ್ದು ಈಗ ತಿಳೀತಾ ಇಷ್ಟು ದಿನ ಏನು ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರು.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";