ಸುದ್ದಿ ಸದ್ದು ನ್ಯೂಸ್
ಚನ್ನಮ್ಮನ ಕಿತ್ತೂರು : ಜನರಿಗೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ತಲುಪಿಸುವುದರ ಜೊತೆಗೆ ಗುಣಮಟ್ಟದ ಕಾಮಗಾರಿಗಳ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಸಾಧಿಸಲು ಅಧಿಕಾರಿಗಳು ಹಾಗೂ ನೌಕರರು ಪ್ರಾಮಾಣಿಕ ಸಹಕಾರ ನೀಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಐತಿಹಾಸಿಕ ಚನ್ನಮ್ಮನ ಕಿತ್ತೂರು ತಾಲೂಕಿಗೆ ಹೊಸ ಮೆರಗು ನೀಡೋಣ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ಕರೆಯಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರಿಗೆ ತೊಂದರೆ ಆಗದಂತೆ ಪ್ರತಿಯೊಬ್ಬ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಿ ಕೆಲಸಗಳನ್ನು ಬೇಗ ಮಾಡಿಕೊಡಬೇಕು ಎಂದು ತಿಳಿಸಿದ ಅವರು ಈಗ ಇರುವ ಸರ್ಕಾರಿ ಅಧಿಕಾರಿಗಳಿಗೆ ನಾನು ಯಾವುದೇ ತರಹದ ತೊಂದರೆ ಕೊಡುವುದಿಲ್ಲ ಆದರೆ ತಾವುಗಳು ಸಾರ್ವಜನಿಕರಿಗೆ ಯಾವುದೇ ತರಹದ ತಪಂತರೆಗಳು ಆಗದಂತೆ ಅವರ ಕೆಲಸಗಳನ್ನು ಕಅನೂನಿನ ಚೌಕಡ್ಡಿನ ಅಡಿಯಲ್ಲಿ ಮಾಡಬೇಕು ಮಾಡದಿದ್ದರೆ ನಾನು ನನ್ನ ಕೆಲಸ ಮಾಡಬೇಕಾಗುತ್ತದೆ ಎಂದರು.
ತಾಲೂಕು ಸಮಗ್ರ ಅಭಿವೃದ್ಧಿ ಆಗಬೇಕಾದರೆ ಗುಣಮಟ್ಟದ ಕೆಲಸಗಳಿಗೆ ಆದ್ಯತೆ ನೀಡಬೇಕು. ಕುಡಿಯುವ ನೀರು, ಗುಣಮಟ್ಟದ ಶಿಕ್ಷಣ ಹಾಗೂ ರಸ್ತೆ ಸಾರಿಗೆ ಸಂಪರ್ಕ, ಕೃಷಿ ಕಾರ್ಯಕ್ಕೆ ಸಮರ್ಪಕ ಬೀಜಗೊಬ್ಬರ ವಿತರಣೆ ಸೇರಿದಂತೆ ಎಲ್ಲ ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಯಗಳ ಎಲ್ಲರೂ ಕೈ ಜೋಡಿಸಿ ಶ್ರಮಿಸೋಣ ಎಂದು ಹೇಳಿದರು.
ತಹಶೀಲ್ದಾರ ರವೀಂದ್ರ ಹಾದಿಮನಿ ಮಾತನಾಡಿ ಪ್ರತಿಯೊಂದು ಇಲಾಖೆಯಲ್ಲಿ ಉತ್ತಮ ಕಾರ್ಯಕ್ಷಮತೆಯಿಂದ ಕಾಪಾಡಿಕೊಂಡು ಕೆಲಸ ಮಾಡಲಾಗುತ್ತಿದೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಉತ್ತಮ ತಾಲೂಕು ಕಟ್ಟಲು ಪ್ರಾಮಾಣಿಕವಾಗಿ ಶ್ರಮಿ ವಹಿಸಿ ಕಾರ್ಯ ನಿರ್ವಹಿಸುತ್ತೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ಕಿತ್ತೂರು ಮತಕ್ಷೇತ್ರದ ಶಾಸಕರಿಗೆ ತಾಲೂಕು ಪಂಚಾಯತ ವತಿಯಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ಪಿ.ಖಾನಪೂರೆ, ಸಹಾಯಕ ನಿರ್ದೇಶಕರಾದ ಸುರೇಶ ನಾಗೋಜಿ, ಲಿಂಗರಾಜ ಹಲಕರ್ಣಿಮಠ, ಸಹಾಯಕ ಲೆಕ್ಕಾಧಿಕಾರಿಯಾದ ಈರಣ್ಣ ಕಮ್ಮಾರ, ಕ್ಷೇತ್ರ ಶೀಕ್ಷಣಾಧಿಕಾರಿ ಆರ್, ಟಿ, ಬಳಿಗಾರ, ಕೃಷಿ ಇಲಾಖೆಯ ಅಧಿಕಾರಿ ಮಂಜುನಾಥ ಕೆಂಚರಾಹುತ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.