ಬೈಲಹೊಂಗಲ: ತಾಲೂಕಿನ ಯರಡಾಲ ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ನೊತನವಾಗಿ ರಚನೆಗೊಂಡ ವಾಲ್ಮೀಕಿ ಸಂಘದಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿದ ಗ್ರಾಮದ ಯುವ ಮುಖಂಡ ಹಾಗೂ ಪತ್ರಕರ್ತ ಉಮೇಶ ಗೌರಿ ಅವರು ಮಹರ್ಷಿ ವಾಲ್ಮೀಕಿಯವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ.ಇಡೀ ಮನುಕುಲಕ್ಕೆ ಬೇಕಾದ ಮಹಾನ್ ಸಂತರಾಗಿದ್ದಾರೆ ಎಂದರು.

ಇಡೀ ವಿಶ್ವಕ್ಕೆ ರಾಮಾಯಣದಂತಹ ಮಹಾಕಾವ್ಯ ಕೊಟ್ಟಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿಯವರ ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ .ರಾಮಾಯಣ ಮಹಾಕಾವ್ಯದ ಮೂಲಕ ನಾವು ಹೇಗೆ ಮೌಲ್ಯಯುತ ಬದುಕು ಕಟ್ಟಿಕೊಳ್ಳಬೇಕು ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಆ ಮಹಾನ್ ದಾರ್ಶನಿಕರ ಹಾಕಿ ಕೊಟ್ಟ ಹೆಜ್ಜೆಯಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮದ ಯುವ ಮುಂಖಡರಾದ ಸಿ ಆರ್ ಪಾಟೀಲ, ವ್ಹಿ.ಎಸ್ ಪಾಟೀಲ.ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಭೀಮಪ್ಪ ಕಮತಗಿ,ಬಸವರಾಜ ಅಪ್ಪಣ್ಣವರ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಮೃತ ಖೋದಾನಪೂರ, ಕುಮಾರ್ ಮುರಗೋಡ,ಸಂತೋಷ ಬನಶೆಟ್ಟಿ,ವಿಠ್ಠಲ ದೇವಲಾಪೂರ ರಫೀಕ್ ನಧಾಪ್ ಸೇರಿದಂತೆ ವಾಲ್ಮೀಕಿ ಸಂಘದ ಸರ್ವ ಸದಸ್ಯರು ಹಾಗೂ ಗ್ರಾಮದ ಗ್ರಾಮಸ್ಥರು ಇದ್ದರು.ಅರುಣ ಖೋದಾನಪೂರ ಕಾರ್ಯಕ್ರಮ ನಿರ್ವಹಿಸಿದರು.