ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಿ ಎಂ ನಿಂಬಣ್ಣವರ

ಉಮೇಶ ಗೌರಿ (ಯರಡಾಲ)

ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಾಗೂ ಪಟ್ಟಣದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯ ಮುಂದಿನ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಸಿ ಎಂ ನಿಂಬಣ್ಣವರ ಕಾಮಗಾರಿಯನ್ನು ಗುಣಮಟ್ಟದ ಕಾಮಗಾರಿ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಗಿರೀಶ್ ಮರಡಿ, ಬಸವರಾಜ ಬಾಸೂರು, ಪಟ್ಟಣ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಗದ್ದಿಗೌಡರ್, ಹಾಗೂ ಪಟ್ಟಣ ಪಂಚಾಯಿತಿ ಸರ್ವ ಸದಸ್ಯರು ಆಸ್ಪತ್ರೆಯ ಸಿಬ್ಬಂದಿಗಳು ಯುವ ಮುಖಂಡರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಶಶಿಕುಮಾರ್ ಕಟ್ಟಿಮನಿ

Share This Article
";