ಸಿರುಗುಪ್ಪ : ತಾಲೂಕಿನ ಮಣ್ಣೂರು ಸೂಗೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಶಾಸಕ ಎಂ.ಎಸ್.ಸೋಮಲಿ0ಗಪ್ಪ ಸಸಿಗೆ ನೀರು ಹಾಕುವುದರೊಂದಿಗೆ ಉದ್ಘಾಟಿಸಿ ಮಾತನಾಡಿದ ಅವರು ಹಲವು ವರ್ಷಗಳಿಂದ ಪರಿಹಾರವಾಗದ ಕೆಲವು ಸಮಸ್ಯೆಗಳು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಇತ್ಯರ್ಥವಾಗಲೆಂದು ತಿಂಗಳಿನ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳಿಂದಲೇ ಗ್ರಾಮವಾಸ್ತವ್ಯ ಕಾರ್ಯಕ್ರಮದೊಂದಿಗೆ ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರವೇ ನಿಮ್ಮ ಮನೆಬಾಗಿಲಿಗೆ ಬರುವಂತಹ ಕಾರ್ಯಕ್ರಮ ಜಾರಿಗೆ ತಂದಿದ್ದು, ಗ್ರಾಮಸ್ಥರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ತುಂಗಾಭದ್ರಾ ನದಿಯ ಕೃಪೆಯಿಂದಾಗಿ ಗ್ರಾಮವು ಉತ್ತಮ ನೀರಾವರಿಯಿಂದಾಗಿ ಸಂಪದ್ಬರಿತವಾಗಿದ್ದು ಇಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡುವ ಉದ್ದೇಶವಿದ್ದು ಮುಂದಿನ ದಿನಗಳಲ್ಲಿ ಯಾರಾದರೂ ಜಾಗ ಕೊಡಲು ಮುಂದಾದಲ್ಲಿ ನನ್ನ ಸ್ವಂತ ಖರ್ಚಿನಲ್ಲಿ ಎರಡು ಎಕರೆ ಜಾಗದಲ್ಲಿ ನಿಮ್ಮ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದಿಂದ ಪಿ.ಯು.ಕಾಲೇಜು ನಿರ್ಮಾಣ ಮಾಡುವುದಾಗಿ ತಿಳಿಸಿದರು.
ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯಕ್ಕೆ ಸಂಬಂಧಿದಂತೆ 13, ಗ್ರಾಮಪಂಚಾಯಿತಿಗೆ 08, ಸಮಾಜ ಕಲ್ಯಾಣ ಇಲಾಖೆಗೆ 01, ಸರ್ವೆಗೆ 01, ಮತ್ತು ಆರೋಗ್ಯ ಇಲಾಖೆಗೆ 01, ಅರ್ಜಿಗಳು ಬಂದಿದ್ದು ಈ ಎಲ್ಲಾ ಅರ್ಜಿಗಳು ಸಾಮಾನ್ಯವಾಗಿ ಶಾಸಕರು ಮತ್ತು ಜಿಲ್ಲಾಡಳಿತದಿಂದಲೇ ಪರಿಹರಿಸಬಹುದಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಸಮಸ್ಯೆಗಳು ಇತ್ಯರ್ಥಕ್ಕೆ ಪ್ರಯತ್ನಿಸಲಾಗುತ್ತದೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ವಾಣಿ, ತಾ.ಪಂ. ಕಾರ್ಯನಿರ್ವಾಹಕ ಶಿವಪ್ಪ ಸುಬೇದಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಡಿ.ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಎ.ಜಲಾಲಪ್ಪ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎ.ಗಾದಿಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಂ.ಸಿದ್ದಯ್ಯ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಜೀರ್ ಅಹಮದ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್, ಮಣ್ಣೂರು ದಳಪತಿ ಪಕ್ಕೀರಪ್ಪ, ಮುಖಂಡ ಬಸವಣ್ಣ ಸ್ವಾಮಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.
ವರದಿ: ಎಸ್ .ಶ್ರೀನಿವಾಸ ನಾಯ್ಕ.ಸಿರುಗುಪ್ಪ