ಮಹಿಳಾ ಕಾನ್ಸ್ಟೇಬಲ್ ಮತ್ತು ಪತಿಯ ಹತ್ಯೆ

ಉಮೇಶ ಗೌರಿ (ಯರಡಾಲ)
  1. ಸುದ್ದಿ ಸದ್ದು ನ್ಯೂಸ್

ಫರಿದಾಬಾದ್: ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಮತ್ತು ಆಕೆಯ ಪತಿ ಶವವಾಗಿ ಪತ್ತೆಯಾಗಿರುವ ಘಟನೆ        ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ.

ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಆಗಿ ನಿಯೋಜನೆಗೊಂಡಿದ್ದ ಸರೋಜಾ ಎನ್‌ಐಟಿ ಪೊಲೀಸ್ ಠಾಣೆಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.ಘಟನೆ ನಡೆದ ದಿನ ಸರೋಜರ 11 ವರ್ಷದ ಮಗನ ಪರೀಕ್ಷೆ ಇದ್ದಿದ್ದರಿಂದ ಆತ ಪರೀಕ್ಷೆ ಬರೆಯಲುಯಲು ಹೋಗಿದ್ದ ಎಂದು ಹೇಳಲಾಗುತ್ತಿದೆ. ಸದ್ಯ ಪೊಲೀಸರು ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಫರಿದಾಬಾದ್‌ನ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಹಿಳಾ ಹೆಡ್ ಕಾನ್ಸ್‌ಟೇಬಲ್ ಕುಟುಂಬದವರ ಹೇಳಿಕೆ ಆಧರಿಸಿ ಮುಂದಿನ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಮೃತ ಹೆಡ್‌ಕಾನ್ಸ್ಟಬಲ್ ಕುಟುಂಬಸ್ಥರು ದೂರು ನೀಡಿದ್ದು, ತನಿಖೆ ಮುಂದುವರೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

 

Share This Article
";