ಬೆಳಗಾವಿ: ಇತ್ತೀಚೆಗೆ ನಿರ್ಮಾಣಗೊಂಡಿರುವ ಇಲ್ಲಿನ 3ನೇ ರೈಲ್ವೆ ಮೇಲ್ವೇತುವೆಯಲ್ಲಿ ಕಳಪೆ ಡಾಂಬರೀಕರಣ ಮಾಡಿದ್ದ ಗುತ್ತಿಗೆದಾರನಿಗೆ 20 ಲಕ್ಷ ರೂ.ದಂಡ ವಿಧಿಸಲಾಗಿದೆ.
ಇತ್ತೀಚೆಗೆ ನಗರದಲ್ಲಿ ನಿರ್ಮಾಣಗೊಂಡಿರುವ 3ನೇ ರೈಲ್ವೆ ಮೇಲ್ವೇತುವೆಯಲ್ಲಿ ಕಳಪೆ ಹಾಗೂ ದುರಸ್ತಿ ಕಾಮಗಾರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಇದನ್ನು ಆದರಿಸಿ ಸುದ್ದಿ-ಸದ್ದು.ಕಾಮ್ ದಲ್ಲಿ ಲೋಕಾರ್ಪಣೆಗೊಂಡ ಎರಡೇ ದಿನದಲ್ಲಿ ಹದಗೆಟ್ಟ ರಸ್ತೆ! ಸಾರ್ವಜನಿಕರ ಆಕ್ರೋಶ. ಎಂಬ ಶಿರ್ಷಿಕೆಯಲ್ಲಿ ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಉದ್ಘಾಟನೆಯಾಗಿದ್ದ ಬ್ರಿಡ್ಜ್ ಮೇಲಿನ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಕಳೆದ ನಾಲ್ಕು ವರ್ಷಗಳಿಂದ ಈ ರೈಲ್ವೇ ಬ್ರಿಡ್ಜ್ ಕಾಮಗಾರಿಯನ್ನು ನಡೆಸಲಾಗಿದೆ. ಇನ್ನು ಇತ್ತೀಚೆಗೆ ಈ ಬ್ರಿಡ್ಜ್ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಕಳೆದ ಎರಡು ದಿನಗಳ ಹಿಂದೆಯಷ್ಟೇ ಅದನ್ನು ಉದ್ಘಾಟಿಸಲಾಗಿತ್ತು. ಇನ್ನು ಎರಡು ದಿನಗಳಲ್ಲಿಯೇ ಈ ರಸ್ತೆ ಹದಗೆಟ್ಟಿದೆ. ಎಂದು ವರದಿ ಮಾಡಲಾಗಿತ್ತು.
ಇದರಿಂದ ಎಚ್ಚೆತ್ತ ಅಧಿಕಾರಿಗಳು ಮುಖ್ಯ ಇಂಜಿನಿಯರ್ ಮೂಲಕ ತನಿಖೆ ನಡೆಸಿದ್ದರು. ರೈಲ್ವೆ ಮೇಲ್ವೇತುವೆಯಲ್ಲಿ ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಡಾಂಬರೀಕರಣದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ, ದಂಡ ವಿಧಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.