ಪಂಚರಾಜ್ಯ ಚುನಾವಣಾ ಫಲಿತಾಂಶ: ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ

ಉಮೇಶ ಗೌರಿ (ಯರಡಾಲ)

ಬೀದರ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಯೋಗಿ ಆದಿತ್ಯನಾಥ ಅವರ ಕೈಗೊಂಡ ಅಭಿವೃದ್ದಿ ಕಾರ್ಯಗಳಿಗೆ ಜನ ಮನ್ನಣೆ ನೀಡಿದ್ದು, ಇದು 2023ರಲ್ಲಿ ನಡೆಯುವ ದೇಶದ ಎಲ್ಲ ರಾಜ್ಯಗಳ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.

ರಾಜ್ಯ ಕಾರ್ಯಕಾರಿಣಿ ಸೋಮನಾಥ ಪಾಟೀಲ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಂಬಾರ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಜೇಂದ್ರ ಕನಕಟಕರ್, ಮಂಡಲ ಅಧ್ಯಕ್ಷ ಪ್ರಭಾಕರ ನಾಗರಾಳೆ, ಪ್ರಧಾನ ಕಾರ್ಯದರ್ಶಿ ರಾಜು ಭಂಡಾರಿ, ಮುಖಂಡರಾದ ಡಾ.ಸಿದ್ದು ಎನ್. ಪಾಟೀಲ, ನಾಗೇಶ ಕಲ್ಲೂರ, ಗಿರೀಶ ತುಂಬಾ, ರವಿಕುಮಾರ ಹೊಸಳ್ಳಿ ಮತ್ತಿತರರಿದ್ದರು.

Share This Article
";