ಬೆಳಗಾವಿ(ಅ.26): ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಇಂದು ಮಂಗಳವಾರ ಬೆಳಗಾವಿಯಲ್ಲಿ ವೀರರಾಣಿ ಚನ್ನಮ್ಮಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ವತಿಯಿಂದ ಬ್ರಹತ್ ಸಂಘಟನೆ ಹಮ್ಮಿಕೊಳ್ಳಲಾಗಿತ್ತು.
ಇನ್ಮು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂ, ಸಿಖ್ಖರ ಮೇಲಿನ ದೌರ್ಜನ್ಯಕ್ಕೆ ಖಂಡಿಸಿ ಹಿಂದೂ ಸಂಘಟನೆಯ ಪ್ರತಿಭಟನಾಕಾರರು ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಬಸವರಾಜ್ ಬಾಗೋಜಿ ಮಾತನಾಡಿ ಹಿಂದೂ ಮಂದಿರಗಳ ಧ್ವಂಸ, ಹಿಂದೂ ಮಹಿಳೆಯರ ಮೇಲಿನ ಅತ್ಯಾಚಾರ, ಹಿಂದೂ ಸನ್ಯಾಸಿಗಳನ್ನು ಹತ್ಯೆ ಮಾಡುತ್ತಿರುವುದನ್ನು ಖಂಡಿಸಿ ದೇಶಾಧ್ಯಂತ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಕೇಂದ್ರದ ಗೃಹ ಮಂತ್ರಿಗಳು ಮಧ್ಯಪ್ರವೇಶಿಸಿ ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳಿಗೆ ಸಂರಕ್ಷಣೆ ಕೊಡುವ ನಿಟ್ಟನಲ್ಲಿ ಅಲ್ಲಿನ ಸರ್ಕಾರಕ್ಕೆ ಆಗ್ರಹಿಸಬೇಕು ಎಂದು ಒತ್ತಾಯಿಸಿದರು.
ನಂತರ ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ನ್ಯಾಯ ಮತ್ತು ಭದ್ರತೆ ನೀಡಬೇಕು, ಹಿಂದುಗಳ ರಕ್ಷಣೆ ಮಾಡಬೇಕು. ಜೀವ ಮತ್ತು ಆಸ್ತಿ ನಷ್ಟಕ್ಕೆ ಪರಿಹಾರ ನೀಡಬೇಕು. ಅದೇ ರೀತಿ ದಾಳಿ ಮಾಡಿದವರನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹಿಂದು ಸಂಘಟನೆ ಮುಖಂಡರಾದ ಕೃಷ್ಣ ಭಟ್, ಶ್ರೀಕಾಂತ ಕದಂ, ವಿಜಯ ಜಾಧವ್ ಹಾಗೂ ನೂರಾರು ಕಾರ್ಯಕರ್ತರು ಬೃಹತ್ ಪಾಲ್ಗೊಂಡಿದ್ದರು.