ಹೆಣ್ಣು ಮಕ್ಕಳು ಕಣ್ಣೀರಿಟ್ಟರೆ ಮನೆಗೆ, ರೈತರು ಕಣ್ಣೀರಿಟ್ಟರೆ ದೇಶಕ್ಕೆ ಒಳ್ಳೆಯದಾಗುವುದಿಲ್ಲ; ಸಂಜೀವಕುಮಾರ ತಿಲಗರ ಅಭಿಮತ

ಸುದ್ದಿ ಸದ್ದು ನ್ಯೂಸ್

ಚನ್ನಮ್ಮನ ಕಿತ್ತೂರು: ತಾಲೂಕಿನ ಎಂ.ಕೆ.ಹುಬ್ಬಳ್ಳಿ  ಖಾಸಗಿ ಶಾಲೆಯೊಂದರಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳ ತರಬೇತಿ, ವಿಷೇಶ ಚೇತನರಿಗೆ ಹಾಗೂ ವಯಸ್ಕರರಿಗೆ ಸಲಕರಣೆ ವಿತರಣಾ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯರು ಹಸಿರು ಕ್ರಾಂತಿ ಪತ್ರಿಕೆ ವರದಿಗಾರರಾದ ಸಂಜೀವಕುಮಾರ ತಿಲಗರ ಅವರು ಉದ್ಘಾಟಕರಾಗಿ ಆಗಮಿಸಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ  ಹೆಣ್ಣು ಮಕ್ಕಳು ಕಣ್ಣೀರಿಟ್ಟರೆ ಮನೆಗೆ ಒಳೆಯದಾಗುವುದಿಲ್ಲ, ರೈತರು ಕಣ್ಣೀರಿಟ್ಟರೆ ದೇಶಕ್ಕೆ ಒಳ್ಳೆಯದಾಗೂವುದಿಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯದಿದ್ದರೆ ದೇಶದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದ ಅವರು ಶ್ರೀ ಧರ್ಮಸ್ಥಳ  ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಈ ಮೂರು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆಯ ಕಾರ್ಯ ಚಟುವಟಿಕೆಗಳನ್ನು ರೂಪಿಸಿಸುವ ಮೂಲಕ ಅವುಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ. ಹೆಣ್ಣು ಮಕ್ಕಳು ಆರ್ಥಿಕವಾಗಿ ಸಧೃಡವಾಗಲು ಈ ಯೋಜನೆಯಿಂದ ಸ್ವ ಉದ್ಯೋಗ ಮಾಡಲು ಹಾಗೂ ಕೃಷಿ ಚಟುವಟಿಕೆಗಳಿಗೆ ಸಾಲ ನೀಡುತ್ತಿದ್ದಾರೆ. ಸ್ವಸಹಾಯ ಗುಂಪುಗಳಲ್ಲಿ ಇರುವವರ ಮಕ್ಕಳ ವಿದ್ಯಾಭ್ಯಾಸಕ್ಕೆ ಬಡವ ಶ್ರೀಮಂತ ಎಂಬ ಭೇದಭಾವ ಮಾಡದೆ ಎಲ್ಲ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುವ ಮೂಲಕ ಪ್ರತಿ ಮನೆಯಲ್ಲಿ ದೀಪ ಹಚ್ಚುವ ಕಾರ್ಯವನ್ನು ಮಾಡುತ್ತಿದ್ದಾರೆ. ಈ ಯೋಜನೆಯ ಸದುಪಯೋಗ ಪಡೆದುಕೊಂಡು ಯೋಜನೆಯನ್ನು ಉತ್ತರೋತ್ತರವಾಗಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲರ ಮೇಲೆ ಇದೆ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಅದೃಶ್ಯಾನಂದ ಗದ್ದಿಹಳ್ಳಿಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಯೋಜನೆಯಿಂದ ಅನೇಕ ಜನಪರ ಕಾರ್ಯಕ್ರಮಗಳು ನಡೆಯುತ್ತಿದ್ದು ಅವುಗಳ ಸದುಪಯೋಗವನ್ನು ಪಡೆದು ಆರ್ಥಿಕವಾಗಿ ಸಬಲರಾಗಿ ಜೊತೆಗೆ ಯೋಜನೆಯಿಂದ ಪಡೆಯುವ ಸಲಾಗಳನ್ನು ಸಮಯಕ್ಕೆ ಸರಿಯಾಗಿ ಮರಳಿ ಬರಿಸಬೇಕು ಎಂದರು.

ತಾಲೂಕಾ ಯೋಜನಾಧಿಕಾರಿ ಸಂದೀಪ ಮಾತನಾಡಿ ಯೋಜನೆಯ ಸೌಲಭ್ಯಗಳನ್ನು ಪಡೆಯುವ ವಿಧಾನ ತಿಳಿಸಿ, ಸ್ವಸಹಾಯ ಗುಂಪುಗಳ ನಿರ್ವಹಣೆ ಯಾವ ರೀತಿ ಮಾಡಬೇಕು ಎಂದು ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಹಸಿರುಕ್ರಾಂತಿ ಪತ್ರಿಕೆ ವರದಿಗಾರ ಸಂಜೀವಕುಮಾರ ತಿಲಗರ ಇವರನ್ನು ಸತ್ಕರಿಸಲಾಯಿತು. ವಿಷೇಶ ಚೇತನರಿಗೆ ಹಾಗೂ ವಯಸ್ಕರರಿಗೆ ಜಲಮಂಗಲ ಯೋಜನೆಯಿಂದ ಮಂಜೂರಾದ ಸಲಕರಣೆಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಈ ವೇಳೆ ಮಾಜಿ ಪ ಪಂ ಸದಸ್ಯ ಬಾಳೇಶ ಪಾಗಾದ, ತಾಲೂಕಾ ಆಂತರಿಕ ಲೆಕ್ಕ ಪರಿಶೋಧಕ ಶಿವಕುಮಾರ, ವಲಯ ಮೇಲ್ವಿಚಾರಕ ಜನಾರ್ಧನ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಸೇರಿದಂತೆ ಇನ್ನೂ ಅನೇಕರು ಇದ್ದರು.

 

 

 

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";