ಎಸ್ ವಿ ಕೆ ಸರ್ಕಾರಿ ಪ್ರೌಢ ಶಾಲೆಯ ನೂತನ ಎಸ್ ಡಿ ಎಂ ಸಿ ಸಮಿತಿ ಆಯ್ಕೆ.

ಉಮೇಶ ಗೌರಿ (ಯರಡಾಲ)

ಕಾದರವಳ್ಳಿ: ಗ್ರಾಮದ ಎಸ್ ವಿ ಕೆ ಸರ್ಕಾರಿ ಪ್ರೌಢ ಶಾಲೆಯ ಅಭಿವೃದ್ಧಿ ಹಾಗೂ ಮೆಲು ಉಸ್ತುವಾರಿ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಅಧ್ಯಕ್ಷರಾಗಿ ಶಿವಪ್ಪ ಗೋಣಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರನ್ನು ಒಳಗೊಂಡ 9 ಸದಸ್ಯರ ಕಮಿಟಿ ಹಾಗೂ ನಾಮನಿರ್ದೇಶನದ 6 ಸದಸ್ಯರನ್ನು ಅವಿರೋಧ ಆಯ್ಕೆ ಮಾಡಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಎಸ್ ಎಸ್ ನೂಲಿನ ಮಾತನಾಡಿ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಯವರು ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಕಾರ್ಯನಿರಹಿಸುವ ಮೂಲಕ ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೆಕಿದೆ ಎಂದರು, ಶಿಕ್ಷಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share This Article
";