ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ ಸಿದ್ದರಾಮಯ್ಯ,ಡಿಕೆಶಿ

ಉಮೇಶ ಗೌರಿ (ಯರಡಾಲ)

ಬೆಂಗಳೂರು: ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
 
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಪ್ರಮಾಣವಚನ ಸ್ವೀಕಾರಕ್ಕೆ ರಾಜ್ಯಪಾಲರು ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಮೇ.20 ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಇದಕ್ಕೂ ಮುನ್ನ, ರಾತ್ರಿ ಕೆಪಿಸಿಸಿ ಕಚೇರಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು.

ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮವನ್ನು ಸಮಾವೇಶದ ಮಾದರಿಯಲ್ಲಿ ನಡೆಸಲು ಯೋಜಿಸಲಾಗಿದೆ. ರಾಜ್ಯಪಾಲರು ಪದಗ್ರಹಣ ಕಾರ್ಯಕ್ರಮ ಮುಕ್ತಾಯಗೊಳಿಸಿ ತೆರಳಿದ ಬಳಿಕ ಸಮಾವೇಶ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share This Article
";