ಉತ್ತರ ಕರ್ನಾಟಕಕ್ಕೆ ಸರ್ಕಾರ ಮಾಡಿದ ದೊಡ್ಡ ದ್ರೋಹ : ಸಿದ್ದರಾಮಯ್ಯ

ಉಮೇಶ ಗೌರಿ (ಯರಡಾಲ)

ಬೆಳಗಾವಿ: ಇದು ಕೇವಲ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ. ಯಾವುದೇ ಸಮಸ್ಯೆಗಳ ಬಗ್ಗೆ ಸಮರ್ಪಕ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎಂಬ ಉದ್ದೇಶಕ್ಕೆ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೂ ಅವಕಾಶ ನೀಡಿಲ್ಲ ಎಂದರು. ಮೂರು ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದರು. ಆದರೆ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆಯಾಗಲಿ, ಸಮಸ್ಯೆಗಳ ಬಗ್ಗೆಯಾಗಲಿ ಯಾವುದೇ ಚರ್ಚೆಯಾಗಿಲ್ಲ.

ಚರ್ಚೆಗೆ ಅವಕಾಶ ನೀಡಿ ಎಂದು ಕೇಳಿದರೂ ಅವಕಾಶ ಕೊಡದೇ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಇದು ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಜನತೆಗೆ ಮಾಡುತ್ತಿರುವ ದೊಡ್ಡ ದ್ರೋಹ ಎಂದರು.

 

Share This Article
";